ಬಿಜೆಪಿ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಕ್ಕೆ ಅನುದಾನ ವಾಪಸ್

0
25

ಕಲಬುರಗಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನಾನು ತೀಕ್ಷ್ಣವಾಗಿ  ಟೀಕೆ ಮಾಡಿರುವುದಕ್ಕೆ ಚಿತ್ತಾಪುರ  ಕ್ಷೇತ್ರಕ್ಕೆ ಬಿಡುಗಡೆಯಾಗಿದ್ದ ಅನುದಾನವನ್ನು ಬಿಜೆಪಿ ಸರ್ಕಾರ ವಾಪಸ್ ಪಡೆದುಕೊಂಡಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದರು‌.

ರಾಮತೀರ್ಥ ಗ್ರಾಮದಲ್ಲಿ ನಡೆದ ಚುನಾವಣೆ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಸರ್ಕಾರದ ಭ್ರಷ್ಟಾಚಾರ‌ ದುರಾಡಳಿತದ‌ ವಿರುದ್ದ ನಾನು ಕಟುವಾದ ಶಬ್ಧಗಳಿಂದ ಟೀಕೆ ಮಾಡಿದ್ದರಿಂದ ನನ್ನ ಕ್ಷೇತ್ರಕ್ಕೆ ಬಿಡುಗಡೆಯಾಗಿದ್ದ ರೂ 228 ಕೋಟಿ ಅನುದಾನವನ್ನು ವಾಪಸ್ ಪಡೆದು‌ ಬಿಜೆಪಿ ಸರ್ಕಾರ ತಾರತಮ್ಯ ನೀತಿ ಅನುಸರಿಸಿದೆ. ಹೀಗಾಗಿ, ಕೆಲ ಅಭಿವೃದ್ದಿ ಕೆಲಸಗಳಿಗೆ ಕುಂಠಿತವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Contact Your\'s Advertisement; 9902492681

ಚಿತ್ತಾಪುರ ಕ್ಷೇತ್ರದ ಅಭಿವೃದ್ದಿಗಾಗಿ ತಮಗೆ ಆಶೀರ್ವಾದ ಮಾಡಬೇಕು ಎಂದು ಅವರು ಮನವಿ ಮಾಡಿದರು. ಜಗನಗೌಡ ರಾಮತೀರ್ಥ, ಭಾಗನಗೌಡ ಸಂಕನೂರು, ಡೇವಿಡ್ ಸಿಮೆಯೋನ್, ಭೀಮಣ್ಣ ಸಾಲಿ ಸೇರಿದಂತೆ ಹಲವರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here