ಕಲಬುರಗಿ: ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡನಿಗೆ ಅಕ್ಕಿ ಕಳ್ಳ, ಡಿಸೇಲ್ ಕಳ್ಳ ಹಾಗೂ ಹಾಲಿನ ಪುಡಿ ಕಳ್ಳತನ ಮಾಡಿ ಮಾರಾಟ ಮಾಡುತ್ತಾನೆ ಎಂದು ನಾನು ಅಥವಾ ಕಾಂಗ್ರೆಸ್ ನವರು ಹೇಳಿಲ್ಲ. ಹೇಳಿದ್ದು ಬಿಜೆಪಿ ಸರ್ಕಾರದ ಗೃಹ ಇಲಾಖೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.
ದಿಗ್ಗಾಂವ ಗ್ರಾಮದಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಅವರು ಮಾತನಾಡಿ ಹಾಲಿನ ಪುಡಿ ಅಕ್ರಮ ಮಾರಾಟ ಮಾಡಿದ ಆರೋಪ ಸಾಬೀತಾಗಿ ಯಾದಗಿರಿ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ ಕೂಡಾ ವಿಧಿಸಿದೆ. ಚಿತ್ತಾಪುರದ ಅಭಿವೃದ್ದಿಯಾಗಬೇಕಾದರೆ ನಿಮ್ಮ ಮಕ್ಕಳ ಶೈಕ್ಷಣಿಕ ಉನ್ನತಿಯಾಗಬೇಕಾದರೆ ನನಗೆ ಮತ ನೀಡಿ ನಿಮ್ಮ ಮಕ್ಕಳು ಮಣಿಕಂಠನಂತೆ ಆಗಬೇಕೆಂದರೆ ಅವನಿಗೆ ಮತ ಹಾಕಿ ಎಂದರು.
ಮೊನ್ನೆ ಯುಪಿ ಸಿಎಂ ಯೋಗಿ ಆದಿತ್ಯನಾಥ ಬಂದು ಚಾವಲ್ ಚೋರ್ ನ ಪರ ಮತಯಾಚನೆ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದ ಅವರು, ಪ್ರಧಾನಿ ಹಾಗೂ ಮಧ್ಯಪ್ರದೇಶ ಸಿಎಂ ಬರಬೇಕಿತ್ತು. ಯಾಕೋ ಅವರು ಬರುವುದು ರದ್ದಾಗಿದೆ ಎಂದರು.
ಬರ ನೆರೆ ಬಂದಾಗ ತೊಗರಿಗೆ ನೆಟೆ ರೋಗ ಬಂದಾಗ ಬರದ ಸಿಎಂ ಬೊಮ್ಮಾಯಿ ಅಕ್ಕಿ ಕಳ್ಳನ ಪರ ಮತಯಾಚನೆ ಮಾಡಲು ಬಂದಿದ್ದಾರೆ ಇದು ದುರಂತ.
ಕಾಂಗ್ರೆಸ್ ಬರಲಿದೆ ಪ್ರಗತಿ ತರಲಿದೆ ಎಂದು ಘೋಷಿಸಿದ ಅವರು ಇನ್ನೇನು ಒಂದು ವಾರದಲ್ಲಿ ಚುನಾವಣೆ ಮುಗಿಯಲಿದೆ. ಕಾಂಗ್ರೆಸ್ ಪಕ್ಷ 130 ಕ್ಕೂ ಹೆಚ್ಚು ಸೀಟು ಗೆದ್ದು ಮತ್ತೆ ಅಧಿಕಾರಕ್ಕೆ ಬಂದು ಅಭಿವೃದ್ದಿ ಮಾಡಲಾಗುವುದು. ವಿಧಾನಸೌಧದಲ್ಲಿ ಗುಡುಗಬೇಕೆಂದರೆ ನೀವು ಪ್ರಿಯಾಂಕ್ ನಿಗೆ ಮತನೀಡಿ ಎಂದು ಮನವಿ ಮಾಡಿದರು.
ಪಿಎಸ್ ಐ, ಎಇಇ, ಜೆಇ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ರಾಜ್ಯದ ಇತಿಹಾಸದಲದಲೇ ಮೊದಲ ಬಾರಿಗೆ ಹಾಗೂ ಐಪಿಎಸ್ ಅಧಿಕಾರಿಗಳು ಜೈಲಿಗೆ ಹೋಗಿದ್ದಾರೆ.
ಇಡೀ ತಾಲೂಕಿನಲ್ಲೇ ದಿಗ್ಗಾಂವ ಗ್ರಾಮ ಅತಿ ಹೆಚ್ಚು ಲೀಡ್ ಕೊಡುತ್ತೇವೆ ಎಂದು ಜನರು ಕೂಗಿ ಹೇಳಿದರು. ಇದಕ್ಕೆ ಪ್ರತಿಯಾಗಿ ಮಾತನಾಡಿದ ಪ್ರಿಯಾಂಕ್, ನೀವು ಹೆಚ್ಚಿನ ಬಹುಮತದಿಂದ ಆರಿಸಿ ಕಳಿಸಿದರೆ ಹೆಚ್ಚಿನ ಅನುದಾನ ತರುತ್ತೇನೆ, ಅಭಿವೃದ್ದಿ ಮಾಡುತ್ತೇನೆ ಎಂದು ಭರವಸೆ ನೀಡಿದರು.
ವೇದಿಕೆಯ ಮೇಲೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ್ ಸೇರಿದಂತೆ ಹಲವರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…