ಬಿಸಿ ಬಿಸಿ ಸುದ್ದಿ

ಬಿಜೆಪಿ ಸರ್ಕಾರ ಕಿತ್ತೊಗೆಯಲು ಪ್ರಿಯಾಂಕ್ ವಾದ್ರಾ ಕರೆ

  • ಕಲಬುರಗಿಯಲ್ಲಿ ಪ್ರಿಯಾಂಕ್ ವಾದ್ರಾ ರೋಡ್ ಶೋ
  • ಡಬಲ್ ಎಂಜಿನ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಕಲಬುರಗಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕಿ ಪ್ರಿಯಾಂಕ್ ವಾದ್ರಾ ಪಕ್ಷದ ಅಭ್ಯರ್ಥಿಗಳ ಪರ ಬುಧವಾರ ಸಂಜೆ ನಗರದಲ್ಲಿ ರೋಡ್ ಶೋ ನಡೆಸಿದರು.

ಕಣ್ಣು ಮುಚ್ಚಿ ಕನಸು ಕಾಣುತ್ತಿರುವ ಮೋದಿಯವರೆ, ಕರ್ನಾಟಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನಿಮ್ಮ‌ಕಣ್ಣಿಗೆ ಬೀಳುತ್ತಿಲ್ಲವೇ? ಕೃಷಿ ಕೂಲಿ ಕಾರ್ಮಿಕರು, ಮಹಿಳೆಯರು ಸಂಘರ್ಷ ಎದುರಿಸುತ್ತಿದ್ದಾರೆ. ಇವುಗಳಿಗೆ ನೀವು ಉತ್ತರ ಕೊಡಲೇಬೇಕು, ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಲವು ಭಾಗ್ಯಗಳನ್ನು ಕೊಟ್ಟಿದೆ. ವಿಕಾಸದ ಹೆಸರಿನಲ್ಲಿ, ಪ್ರದೇಶದ ಹೆಸರಿನಲ್ಲಿ ಎಲ್ಲರನ್ನು ಒಡೆದು ಆಳಿದ್ದಾರೆ ಎಂದು ದೂರಿದರು

ನೆಹರೂ ಗಂಜ್ ಬಳಿ ಇರುವ ನಗರೇಶ್ವರ ಶಾಲೆಯಿಂದ ಕಿರಾಣಾ ಬಜಾರ್, ಚೌಕ್ ಪೊಲಿಸ್ ಠಾಣೆ, ಸೂಪರ್ ಮಾರ್ಕೆಟ್ ಮೂಲಕ ಮೂಲಕ ತೆರೆದ ವಾಹನದಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರತ್ತ ಕೈ ಬೀಸುತ್ತ ಜಗತ್ ವೃತ್ತದವರೆಗೆ ತಲುಪಿದರು.

ದಾರಿಯುದ್ದಕ್ಕೂ ಗೊಂಬೆ ಕುಣಿತ, ಪಕ್ಷದ ಧ್ವಜ ಹಿಡಿದ ಯುವಕರು, ಡೊಳ್ಳು, ಹಲಗೆ ಕುಣಿತ, ಲಂಬಾಣಿ ನೃತ್ಯ ಸೇರಿದಂತೆ ವಿವಿಧ ಕಲಾ ತಂಡಗಳು ಅವರನ್ನು ಸ್ವಾಗತಿಸಿದರು.

ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕ್ ಗಾಂಧಿ, ಶೇ. 40 ಪರ್ಸೆಂಟೇಜ್ , ಪಿಎಸ್ಐ ನೇಮಕಾತಿ ಹಗರಣ ಸೇರಿದಂತೆ ಸಾಕಷ್ಟು ಭ್ರಷ್ಟಾಚಾರ ಆರೋಪ ಹೊತ್ತಿರುವ ರಾಜ್ಯ ಸರ್ಕಾರ ಹಾಗೂ ಚುನಾವಣಾ ಪ್ರಣಾಳಿಕೆಯನ್ನೇ ಈಡೇರಿಸದ ಕೇಂದ್ರ ಸರ್ಕಾರ ಬಿಜೆಪಿ ಪಕ್ಷದ ದುರಾಡಳಿತವನ್ನು ಖಂಡಿಸಿದರು.

ಸಿಲೆಂಡರ್ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಜಿಎಸ್ ಟಿ, ನೋಟ್ ಬಂದಿಯಿಂದ ಬಡವರು, ವ್ಯಾಪರಸ್ಥರು, ಮಧ್ಯಮವರ್ಗದವರು ಸೇರಿದಂತೆ ಈ ದೇಶದ ಜನರು ರೋಸಿ ಹೋಗಿದ್ದು, ಕೃಷಿ, ಕೂಲಿಕಾರರು ಹಾಗೂ ರೈತಾಪಿ ವರ್ಗದವರು ಬಳಲಿ ಬೆಂಡಾಗಿದ್ದಾರೆ. ಹೀಗಾಗಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಕರೆ ನೀಡಿದರು.

ಭಾಷಣದ ಆರಂಭದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಸ್ಮರಿಸಿದ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಧರ್ಮಸಿಂಗ್ ಮುಂತಾದವರ ಶ್ರಮದಿಂದಾಗಿ 371 ( ಜೆ) ತಿದ್ದುಪಡಿ, ಸಿಯುಕೆ, ಇಎಸ್ಐ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಕಾಂಗ್ರೆಸ್ ಗ್ಯಾರಂಟಿಗಳು ಜನರಿಗೆ ಆಶಾದಾಯಕವಾಗಿ ಕಾಣುತ್ತಿವೆ ಎಂದರು.

ಅಹ್ಮದ್ ಪಟೇಲ್, ಶಾಸಕರಾದ ಪ್ರಿಯಾಂಕ್ ಖರ್ಗೆ, ಡಾ. ಅಜಯಸಿಂಗ್, ಕನೀಜ್ ಫಾತಿಮಾ, ಡಾ. ಶರಣಪ್ರಕಾಶ ಪಾಟೀಲ ಅಲ್ಲಮಪ್ರಭು ಪಾಟೀಲ, ಜಿಲ್ಲಾಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ, ಸುಭಾಷ ರಾಠೋಡ್ ಇತರರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago