ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ 40 ಸಾವಿರ ಹುದ್ದೆಗಳು ಖಾಲಿವೆ ಅದರಲ್ಲಿ 16 ಸಾವಿರ ಶಿಕ್ಷಕರ ಹುದ್ದೆಗಳು ಇವೆ. ಕಾಂಗ್ರೆಸ್ ಅಧಿಕಾರಕ್ಕೆ ತಂದರೇ 2.5 ಲಕ್ಷ ಖಾಲಿ ಹುದ್ದೆಗಳು ಭರ್ತಿ ಮಾಡಲಾಗುವುದೆಂದು ಕಾಂಗ್ರೆಸ್ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ವಾದ್ರಾ ಭರವಸೆ ನೀಡಿದರು.
ಬುಧವಾರ ಕಲಬುರಗಿಯಲ್ಲಿ ಬೃಹತ್ ರೋಡ್ ಶೋ ನಡೆಸಿ ಬಹಿರಂಗ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಅಡಾನಿ ಮತ್ತು ಅಂಬಾನಿ ಒಂದು ದಿನದ ಆದಾಯ 16 ಸಾವಿರ ಕೋಟಿಯಾಗಿದೆ. ದೇಶದ ರೈತರ ಆದಾಯ ಪ್ರತಿ ದಿನಕ್ಕೆ 27 ರೂ. ಇದೆ. ಅಡಾನಿ ಮತ್ತು ಅಂಬಾನಿ ದೇಶದ ಸಂಪತ್ತು ಅವರಿಗೆ ನೀಡಲಾಗುತ್ತಿದೆ ಎಂದರು.
ಮತದಾರರು ಜಾಗೃತರಾಗಿ ಚುನಾವಣೆ ಸಂದರ್ಭದಲ್ಲಿ ಧರ್ಮದ ಹೆಸರಲ್ಲಿ ಪ್ರಚೋದಿಸಿ ನಿಮ್ಮನ್ನು ಮೂರ್ಖನಾಗಿಸುವ ಕೆಲಸ ಬಿಜೆಪಿ ಮಾಡುತ್ತಿದೆ ಇದಕ್ಕೆ ಬಲಿಯಾಗಿ ದೇಶದ ಭವಿಷ್ಯವನ್ನು ಬಲಿಕುಡಬೇಡಿ ಎಂದು ಮನವಿ ಮಾಡಿದರು.
ಪಿಎಸ್ಐ ನೇಮಕಾತಿ ಸೇರಿದಂತೆ ಹಲವು ಹುದ್ದೆಗಳಲ್ಲಿ ರಾಜ್ಯದ ಬಿಜೆಪಿ ಸರಕಾರ ಹಗರಣ ನೆಡೆಸಿದೆ. ಈ ಲೋಟಿ ಖೋರ ಸರಕಾರ ಕಿತ್ತೊಹಾಕಿ ಕಾಂಗ್ರೆಸ್ ಪೂರ್ಣ ಬಹುಮತ ನೀಡಿದ್ದಾರೆ ಪ್ರಣಾಳಿಕೆ ಭರವಸೆಗಳನ್ನು ಈಡೇರಿಸಿ ಜನಪರ ಆಡಳಿತ ನೀಡುತ್ತವೆ ಎಂದರು.
ಈ ವೇಳೆಯಲ್ಲಿ ಕಲಬುರಗಿ ಉತ್ತರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕನೀಜ್ ಫಾತೀಮಾ, ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಅಲ್ಲಮಪ್ರಭು ಪಾಟೀಲ್, ಪ್ರಿಯಾಂಕ್ ಖರ್ಗೆ, ಡಾ. ಅಜಯಸಿಂಗ್, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಜಗದೇವ್ ಗುತ್ತೇದಾರ್, ಮಜರ್ ಆಲಮ್ ಖಾನ್ ಸೇರಿದಂತೆ ಪಾಲಿಕೆಯ ಸದಸ್ಯರು ಸೇರಿದಂತೆ ಲಕ್ಷಕ್ಕೂ ಹೆಚ್ಚು ಜನ ಬಹಿರಂಗ ಸಭೆಯಲ್ಲಿ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…