ಬಿಸಿ ಬಿಸಿ ಸುದ್ದಿ

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎನ್ನುವುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಕೊನೆಪಕ್ಷ ಈಗಲಾದರೂ ಸತ್ಯ ಹೊರಬಂತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.

ಸಂಸದೆ ಸುಮಲತಾ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂಗಲದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮೇಲಿನಂತೆ ಮಾಜಿ ಮುಖ್ಯಮಂತ್ರಿಗಳು ಉತ್ತರಿಸಿದರು.

ಈಗ ಸತ್ಯ ಹೊರಗೆ ಬಂತಲ್ಲ, ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ. ಮಂಡ್ಯದಲ್ಲಿ, ತುಮಕೂರಿನಲ್ಲಿ ಏನೀನು ಮಾಡಿದರು ಅನ್ನುವುದು ಈಗ ಅವರ ಬಾಯಿಂದಲೇ ಸತ್ಯ ಹೊರಗೆ ಬಂದಿದೆ. ಈಗ ಅದೆಲ್ಲ ಮುಗಿದು ಹೋದ ಅಧ್ಯಾಯ. ನನ್ನ ಸರಕಾರ ತೆಗೆದವರರೇ ಅವರು ಎಂದು ಅವರು ಹೇಳಿದರು.

ಶಾಸಕರನ್ನೇ ನೋಡಿಲ್ಲ, ಭೇಟಿ ಮಾಡಿಲ್ಲ ಅಂತ ಹೇಳುತ್ತಾರೆ ಇವರು. 19,000 ಕೋಟಿ ಅನುದಾನವನ್ನು ಕಾಂಗ್ರೆಸ್ ಪಕ್ಷದ 78 ಜನ ಶಾಸಕರಿಗೆ ನೀಡಿದ್ದೇನೆ. ಶಾಸಕರನ್ನು ಭೇಟಿ ಮಾಡದೇ ಇಷ್ಟು ಅನುದಾನ ನೀಡಲು ಸಾಧ್ಯವೇ? ಎಂದು ಅವರು ಪ್ರಶ್ನಿಸಿದರು.

ಕೃಷ್ಣ ಕಚೇರಿಯಲ್ಲಿ ದಿನಕ್ಕೆ 5 ಸಾವಿರ ಜನ ಸೇರಿರುತ್ತಿದ್ದರು. ಸಾವಿರಾರು ಜನರನ್ನು ಭೇಟಿಯಾದ ಮೇಲೆ ಶಾಸಕರನ್ನು ಕೂಡ ಭೇಟಿಯಾಗಿ 10-15 ಅಭಿವೃದ್ಧಿ ಸಭೆಗಳನ್ನು ನಡೆಸುತ್ತಿದ್ದೆ. ನಾನೇನು ನಿದ್ದೆ ಮಾಡುತ್ತಿದೀನಾ? ತಪ್ಪು ಮಾಡಿದವರು ಅವರು, ಈಗ ನನ್ನ ಮೇಲೆ ಅಪಾದನೆ ಮಾಡ್ತಾರೆ ಎಂದು ಖಾರವಾಗಿ ಪ್ರತಿಕ್ರಿಯಿಸಿದರು ಮಾಜಿ ಮುಖ್ಯಮಂತ್ರಿಗಳು.

ಎರಡೂ ರಾಷ್ಟ್ರೀಯ ಪಕ್ಷಗಳು ಜನರ ಸಮಸ್ಯೆ ಚರ್ಚೆ ಮಾಡುವ ಅಂಶಗಳನ್ನು ಇಟ್ಟುಕೊಂಡಿಲ್ಲ. ಕೇವಲ ಭಾವನಾತ್ಮಕ ವಿಷಯಗಳನ್ನು ಕೆದಕಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇದು ಬಹಳ ದಿನ ನಡೆಯುವುದಿಲ್ಲ ಎಂದ ಅವರು; ಸ್ವಲ್ಪ ದಿನ ವಿಷಕನ್ಯೆ, ವಿಷಸರ್ಪ ಇತ್ತು, ಈಗ ಬಜರಂಗಿ ವಿಚಾರ ತಗೊಂಡು ಹೋಗ್ತಿದ್ದಾರೆ. ವೋಟಿಂಗ್ ದಿನ ಈ ವಿಷಯ ಮುಗಿಯುತ್ತದೆ. ಇವರು ಜನರನ್ನು ಯಾಮಾರಿಸುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ನಾನು ವಿಷಯಧಾರಿತವಾಗಿ ಚುನಾವಣೆ ಎದುರಿಸುತ್ತೇನೆ. ನನಗೆ ಆರ್ಥಿಕ ಶಕ್ತಿ ಇದ್ದಿದ್ದರೆ 130 ರಿಂದ 140 ಸೀಟು ಗೆಲ್ಲುತ್ತಿದ್ದೆ. ಹಣ ಇಲ್ಲದೆ ಹಿನ್ನೆಡೆ ಆಗಿದೆ. ಜನ ದುಡ್ಡಿಗೆ ಮರಳಾಗುವುದಿಲ್ಲ ಎಂಬ ವಿಶ್ವಾಸವಿದೆ. ಮುಖ್ಯಮಂತ್ರಿ ತವರು ಕ್ಷೇತ್ರ ಶಿಗ್ಗಾವಿ ಕ್ಷೇತ್ರದಲ್ಲೇ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಜನತಾದಳಕ್ಕೆ ಉತ್ತಮ ಸ್ಪಂದನೆ ಸಿಗುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ಕಾಂಗ್ರೆಸ್, ಬಿಜೆಪಿ ನಾಯಕರು ಜೆಡಿಎಸ್ ಅಭ್ಯರ್ಥಿಗಳನ್ನು ಸಂಪರ್ಕ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ ಎಂಬ ಪ್ರಶ್ನೆಗೆ ಉತ್ತರ ಕೊಟ್ಟ ಮಾಜಿ ಮುಖ್ಯಮಂತ್ರಿ, ಅದರಲ್ಲಿ ಸಂಶಯವೇ ಇಲ್ಲ. ಸಮೀಕ್ಷೆಗಳು ಏನೇ ಇದ್ದರೂ ಅದು ಕೃತಕವಾದುದು. ಸಮೀಕ್ಷೆಗಳಲ್ಲಿ ಯಾವುದೇ ಸತ್ಯಾಂಶಗಳಿಲ್ಲ. ಎರಡೂ ಪಕ್ಷಗಳು ಯಾವುದೇ ಕಾರಣಕ್ಕೂ 100 ಸ್ಥಾನ ದಾಟೋಕೆ ಸಾಧ್ಯವಾಗಿಲ್ಲ ಎಂದರು ಅವರು.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

34 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago