ಕಲಬುರಗಿ: ರಾಜ್ಯದಲ್ಲಿ ಜಿರೋ ಪಸೆರ್ಂಟೇಜ್ ಸರ್ಕಾರ ತರಲು ಆಮ್ ಆದ್ಮಿ ಪಾರ್ಟಿಗೆ ಬೆಂಬಲಿಸಬೇಕು ಎಂದು ಕಲಬುರಗಿ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಸಿದ್ದು ಪಾಟೀಲ್, ಉತ್ತರ ಕ್ಷೇತ್ರದ ಅಭ್ಯರ್ಥಿ ಸಜ್ಜಾದ ಅಲಿ ಇನಾಂದಾರ್, ಅಫಜಲಪುರ ಕ್ಷೇತ್ರದ ಅಭ್ಯರ್ಥಿ ಪೆÇ್ರ. ಶಿವರಾಜ ಪಾಟೀಲ್ ಮನವಿ ಮಾಡಿದರು.
ಜಿಲ್ಲೆಯ 9 ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿ ಕಣದಲ್ಲಿದ್ದಾರೆ. ಮೂರು ಪಕ್ಷಗಳ ಅಭ್ಯರ್ಥಿಗಳ ಮಧ್ಯೆಯೂ ಆಮ್ ಆದ್ಮಿ ಪಾರ್ಟಿ ಪ್ರಣಾಳಿಕೆಗಳ ಬಗ್ಗೆ ಜನರ ಒಲುವು ಹೆಚ್ಚುತ್ತಿದೆ. ಪ್ರತಿ ಕುಟುಂಬಕ್ಕೆ 300 ಯೂನಿಟ್ ಉಚಿತ ವಿದ್ಯುತ್ಛಕ್ತಿ ಪೂರೈಕೆ, ನಿರುದ್ಯೋಗಿ ವಿದ್ಯಾವಂತರಿಗೆ ಮಾಸಿಕ 3 ಸಾವಿರ ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ಜನಪರ ಮತ್ತು ಭ್ರμÁ್ಟಚಾರ ಮುಕ್ತ ಆಡಳಿತ ನಡೆಸಲು ಆಮ್ ಆದ್ಮಿ ಪಾರ್ಟಿಗೆ ಬೆಂಬಲಿಸಬೇಕು. ದೆಹಲಿ ಮತ್ತು ಪಂಜಾಬ ರಾಜ್ಯಗಳ ಮಾದರಿಯಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಸವಲತ್ತು ಒದಗಿಸಿಕೊಡಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಲಬುರಗಿ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಸಿದ್ದು ಪಾಟೀಲ್ ಪ್ರತಿಕ್ರಿಯಿಸಿ, ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳಲ್ಲಿ ನಡುಕ ಶುರುವಾಗಿದೆ. ಬಿಜೆಪಿ ಅಭ್ಯರ್ಥಿ ಪರ ಟೋಕನ್ ಹಂಚಿಕೆ ಮಾಡುತ್ತಿದ್ದ ಶಿಕ್ಷಕನೊರ್ವನ ಬಂಧನವಾಗಿದೆ. ಈ ಬಗ್ಗೆ ಬ್ರಹ್ಮಪುರ ಪೆÇಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎಂದರು. ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಈಡೇರಿವೆಯೇ? ಎಂದು ಪ್ರಶ್ನಿಸಿದರು.
ಉತ್ತರ ಕ್ಷೇತ್ರದ ಅಭ್ಯರ್ಥಿ ಸಜ್ಜಾದ ಅಲಿ ಇನಾಂದಾರ್, ಉತ್ತರ ಕ್ಷೇತ್ರದಲ್ಲಿ ಸುಸಜ್ಜಿತ ಮಲ್ಟಿಸ್ಪೆμÁಲಿಟಿ ಆಸ್ಪತ್ರೆ ನಿರ್ಮಿಸುವ ಕನಸು ಇದೆ. ಹಿಂದೂ-ಮುಸ್ಲಿಂ ಮತ ಪ್ರಭುಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶೇ. 90 ರಷ್ಟು ಜನ ಸ್ಪಂದಿಸಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ಪ್ರಣಾಳಿಕೆಗಳು ಮನೆ ಮುರಿಯುವಂತಿವೆ. ಪ್ರತಿ ಕುಟುಂಬದ ಮಹಿಳೆಯೊರ್ವಳಿಗೆ ಗೌರವಧನ ನೀಡುವ ಬಗ್ಗೆ ಗ್ಯಾರಂಟಿ ಕಾರ್ಡ್ ಹಂಚಿಕೆ ಮಾಡುತ್ತಿದೆ. ಒಂದೇ ಕುಟುಂಬದಲ್ಲಿ ಇರುವ ಹಿರಿಯ ಸೊಸೆಯಂದಿರು, ಇನ್ನುಳಿದವರ ಪಾಡೇನು? ಎಂದು ಪ್ರಶ್ನಿಸಿದರು.
ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…
ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…
ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…
ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…
ಕಲಬುರಗಿ; ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಅಫಜಲಪೂರ, ಸೇಡಂ, ಆಳಂದ, ಚಿಂಚೋಳಿ ತಾಲೂಕಿನಲ್ಲಿ ಜಂಗಲ್ ಕಟಿಂಗ್ ಹಾಗೂ ಮೆಂಟನೆನ್ಸ್…