ಬಿಸಿ ಬಿಸಿ ಸುದ್ದಿ

ಜನ ಸಾಮಾನ್ಯರ ಹಿತ ಮರೆತಿರುವ ಬಿಜೆಪಿ-ಕಾಂಗ್ರೆಸ್ ಪಕ್ಷಗಳನ್ನು ಸೋಲಿಸಿ: ಗಣಪತರಾವ ಕೆ ಮಾನೆ

ಶಹಾಬಾದ; ಚುನಾವಣೆಯ ಸಂದರ್ಭಗಳಲ್ಲಿ ಟಾಟಾ-ಬಿರ್ಲಾ-ಅಂಬಾನಿ-ಆದಾನಿ ಗಳಂತಹ ಬಂಡವಾಳಶಾಹಿಗಳಿಂದ ಕೋಟ್ಯಾಂತರ ರೂಪಾಯಿಗಳನ್ನು ಪಡೆದು ಅವರ ಪಾದಸೇವೆಯಲ್ಲಿಯೇ ತಮ್ಮ ಆಯಸ್ಸನ್ನು ಕಳೆಯುತ್ತಿರುವ ಹಾಗೂ ಜನಸಾಮಾನ್ಯರ ಹಿತಾಸಕ್ತಿಯನ್ನು ಮರೆತಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳನ್ನು ಈ ಚುನಾವಣೆಯಲ್ಲಿ ಸೋಲಿಸಿ, ನಮ್ಮ ಪಕ್ಷವನ್ನು ಗೆಲ್ಲಿಸಬೇಕೆಂದು ಗುಲಬರ್ಗಾ ಗ್ರಾಮೀಣ ಮತಕ್ಷೇತ್ರದ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿಯಾದ ಕಾಮ್ರೇಡ್ ಗಣಪತರಾವ ಕೆ ಮಾನೆ ಯವರು ಹೇಳಿದರು.

ಅವರು ನಗರದ ಹನುಮಾನ ನಗರದಲ್ಲಿ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಮನೆ ಮನೆ ಭೇಟಿ ಮಾಡಿ ನಂತರ ಬೀದಿಬದಿ ಸಭೆಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದರು.

ಮುಂದುವರೆದು ಮಾತನಾಡಿದ ಅವರು ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಸರ್ಕಾರವು ಟಾಟಾ-ಬಿರ್ಲಾಗಳ ಸೇವೆಯನ್ನು ಮಾಡಿ ಅವರನ್ನು ಆಗರ್ಭ ಶ್ರೀಮಂತರನ್ನಾಗಿಸಿತು. ಇಂದು ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಅಂಬಾನಿ-ಆದಾನಿಗಳ ಸಂಪತ್ತನ್ನು ಹೆಚ್ಚಿಸುವಂತಹ ನೀತಿಗಳನ್ನು ಜಾರಿ ಮಾಡುತ್ತಿವೆ. ಜನರಿಗೆ ಗುಣಮಟ್ಟದ ಜೀವನವನ್ನು ಒದಗಿಸದ ಈ ಎರಡು ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳು. ಇಂತಹ ಪಕ್ಷಗಳ ಸರ್ಕಾರಗಳನ್ನು ಕಿತ್ತೊಗೆದು ನಮ್ಮ ಪಕ್ಷಕ್ಕೆ ಬೆಂಬಲ ನೀಡಬೇಕೆಂದು ಕರೆ ನೀಡಿ, ಮಡಿಕೆಯ ಗುರುತಿಗೆ ಮತ ಚಲಾಯಿಸಬೇಕೆಂದು ಮನವಿ ಮಾಡಿದರು.

ಎಸ್.ಯು.ಸಿ.ಐ(ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾದ ಕಾಮ್ರೇಡ್ ರಾಮಣ್ಣ ಎಸ್ ಇಬ್ರಾಹಿಂಪೂರ ರವರು ಇದೇ ಸಂದರ್ಭದಲ್ಲಿ ಮಾತನಾಡುತ್ತ, ಕಾಂಗ್ರೆಸ್-ಬಿಜೆಪಿ ಪಕ್ಷಗಳ ನೀತಿಗಳಿಂದ್ದಾಗಿ ದೇಶದ ಶೇಕಡಾ 90ರಷ್ಟು ಆಸ್ತಿಯು ಕೇವಲ ಶೇಕಡಾ 1 ರಷ್ಟು ಜನರಲ್ಲಿ ಶೇಕರಣೆಗೊಂಡಿದೆ. ಇದು ದೇಶದ ಜನರಲ್ಲಿ ಬೃಹತ ಪ್ರಮಾಣದ ಆರ್ಥಿಕ ಅಸಮಾನತೆಯನ್ನು ಸೃಷ್ಟಿ ಮಾಡಿದೆ ಎಂದು ಹೇಳಿದ ಅವರು ಜನರಿಗೆ ಸೇರಿದ ದೇಶದ ಸಂಪತ್ತನ್ನು ಸರಿಸಮಾನವಾಗಿ ಹಂಚಿಕೆಯಾಗಬೇಕೆಂಬ ಗುರಿಯನ್ನು ಇಟ್ಟುಕೊಂಡು ಹೋರಾಟ ಬೆಳೆಸುತ್ತಿರುವ ಎಸ್.ಯು.ಸಿ.ಐ(ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿಯಾದ ಕಾಮ್ರೇಡ್ ಗಣಪತರಾವ ಕೆ ಮಾನೆ ಅವರನ್ನು ಬೆಂಬಲಿಸಿ, ಗೆಲ್ಲಿಸಬೇಕೆಂದು ಕರೆ ನೀಡಿದರು. ಅಭ್ಯರ್ಥಿ ಹಾಗೂ ಪಕ್ಷದ ಬೆಂಬಲಿಗರು ಜನರಿಗೆ ಖುದ್ದಾಗಿ ಭೇಟಿಯಾಗಿ ನಮ್ಮ ಪಕ್ಷಕ್ಕೆ ಬೆಂಬಲಿಸಬೇಕೆಂದು ಕೇಳಿಕೊಂಡರು.

ಈ ಸಂದರ್ಭದಲ್ಲಿ ಪಕ್ಷದ ಸ್ಥಳೀಯ ಸಮಿತಿಯ ಸದಸ್ಯರಾದ ಕಾಮ್ರೇಡ್ ರಾಘವೇಂದ್ರ ಎಮ್.ಜಿ. ಗುಂಡಮ್ಮ ಮಡಿವಾಳ, ಜಗನ್ನಾಥ್ ಎಸ್. ಎಚ್., ರಾಜೇಂದ್ರ ಆತ್ನೂರ್, ಸಿದ್ದು ಚೌಧರಿ, ತುಳಜರಾಮ, ಸದಸ್ಯರಾದ ಮಹಾದೇವಿ ಮಾನೆ, ತಿಮ್ಮಣ್ಣ ಮಾನೆ, ನೀಲಕಂಠ ಹುಲಿ, ರಘು ಪವಾರ, ಕಿರಣ ಮಾನೆ, ರಮೇಶ ದೇವಕರ್, ದೇವರಾಜ, ಅಜಯ ಗುರಜಾಲಕರ್, ಆನಂದ, ಸಾಕ್ಷಿ ಮಾನೆ, ರಾಧಿಕ ಚೌಧರಿ, ಪವನ, ಮಹಾದೇವಿ ಆತ್ನೂರ್, ರಂಗನಾಥ, ಕೀರ್ತಿ.ಎಸ್.ಎಮ್. ಮುಂತಾದವರು ಉಪಸ್ಥಿತರಿದ್ದರು.

emedialine

Recent Posts

ಎಂ.ಎಸ್ ಇರಾಣಿ ವಿದ್ಯಾರ್ಥಿಗೆ ದ್ವೀತಿಯ ಸ್ಥಾನ

ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…

9 hours ago

ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ

ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…

9 hours ago

ಸ್ಲಂ ಜನಾಂದೋಲನ ಜಿಲ್ಲಾ ಘಟಕದಿಂದ ಹಕ್ಕು ಪತ್ರ ನೊಂದಣಿ ಖಾತ ಪ್ರತಿ ವಿತರಣೆ

ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ  ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ  ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…

9 hours ago

ಸಂವಿಧಾನ ದಿನಾಚರಣೆ

ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್‍ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…

9 hours ago

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪೆÇೀಲೀಸ್ ಇಲಾಖೆಗೆ ಅಭಿನಂದನೆ

ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…

9 hours ago

ಲೋಕೋಪಯೋಗಿ ಕಚೇರಿ ಮುಂದೆ ನಮ್ಮ ಕರ್ನಾಟಕ ಸೇನೆಯಿಂದ ಧರಣಿ ಸತ್ಯಾಗ್ರಹ

ಕಲಬುರಗಿ; ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಅಫಜಲಪೂರ, ಸೇಡಂ, ಆಳಂದ, ಚಿಂಚೋಳಿ  ತಾಲೂಕಿನಲ್ಲಿ ಜಂಗಲ್ ಕಟಿಂಗ್ ಹಾಗೂ ಮೆಂಟನೆನ್ಸ್…

9 hours ago