ಜೇವರ್ಗಿ: ಎಸ್.ಎಸ್.ಎಲ್.ಸಿ ಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸಂಗೊಳ್ಳಿ ರಾಯಣ್ಣ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ತಾಲೂಕಿನ ಅಂಕಲಗ ಗ್ರಾಮದಲ್ಲಿ ಗುರುವಾರ ಇಲ್ಲಿನ ಪ್ರೌಢ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿರುವ ಸಂಗೊಳ್ಳಿ ರಾಯಣ್ಣನ ಜಯಂತಿ ಮತ್ತು ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಪ್ರೌಢಶಾಲೆಯ ವಿದ್ಯಾರ್ಥಿ ಗಳಿಗೆ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಸಾನಿಧ್ಯ ವಹಿಸಿಮಾತನಾಡಿದ ಗುರುಬಸವ ಶಿವಾಚಾರ್ಯರು, ಗ್ರಾಮೀಣ ಮಟ್ಟದಲ್ಲಿನ ವಿದ್ಯಾರ್ಥಿಗಳು ರಾಜ್ಯ , ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಬೇಕು ಎಂದು ನುಡಿದರು. ಅತಿಥಿಯಾಗಿ ಆಗಮಿಸಿ ಮಾತನಾಡಿದ, ಜಿಲ್ಲಾ ಪಂಚಾಯತ್ ಸದಸ್ಯರಾದ ಚನ್ನಮಲ್ಲಯ್ಯ ಹಿರೇಮಠ, ಶಾಲೆಯು ಸತತ ನಾಲ್ಕು ವರ್ಷಗಳಿಂದ ನೂರಕ್ಕೆ ನೂರರಷ್ಟು ಫಲಿತಾಂಶ ಬಂದಿದ್ದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವೀರ ಸಂಗೊಳ್ಳಿ ರಾಯಣ್ಣ ನೌಕರರ ಸಂಘದ ಅಧ್ಯಕ್ಷರು,ಸದಸ್ಯರು, ಶಾಲೆಯ ಮುಖ್ಯ ಗುರುಗಳಾದ ಅಮೋಗಪ್ಪ ಹೀರೆಕುರಬರ್,ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…