ಬಿಸಿ ಬಿಸಿ ಸುದ್ದಿ

ಮಾಧ್ಯಮಗಳಲ್ಲಿ ಮತದಾನದ 48 ಗಂಟೆ ಮುನ್ನ ಚುನಾವಣಾ ಚರ್ಚೆ, ಸಂವಾದ, ಸಮೀಕ್ಷೆಗಳಿಗೆ ನಿರ್ಬಂಧ

ಕಲಬುರಗಿ; ಕರ್ನಾಟಕ ವಿಧಾನಸಭಾ ಚುನಾವಾಣೆಗೆ ಮೇ-10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ (ಮೇ-8ರ ಸಾಯಂಕಾಲ 6 ಗಂಟೆಯಿಂದ ಮೇ-10ರ ಸಾಯಂಕಾಲ 6.30 ಗಂಟೆ ವರೆಗೆ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಮೇಲೆ ಪ್ರಭಾವ ಬೀರುವ ದೂರದರ್ಶನದಲ್ಲಿ ಸಿನಿಮಾಟೋಗ್ರಾಫಿ, ಚರ್ಚೆ, ಸಂವಾದ, ವಿಶ್ಲೇಷಣೆ, ಚುನಾವಣೋತ್ತರ ಸಮೀಕ್ಷೆ, ಹೀಗೆ ಯಾವುದೇ ಜಾಹೀರಾತು ಹಾಗೂ ಸುದ್ದಿಯನ್ನು ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದಾಗಲಿ ಅಥವಾ ಬಿತ್ತರಿಸುವುದನ್ನು ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 125ರಂತೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲೆ ಎಂ.ಸಿ.ಎಂ.ಸಿ. ಅಧ್ಯಕ್ಷ ಯಶವಂತ ವಿ. ಗುರುಕರ್ ತಿಳಿಸಿದ್ದಾರೆ.

ಒಂದು ವೇಳೆ ನಿಯಮ ಉಲ್ಲಂಘಿಸಿ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸುದ್ದಿ ಬಿತ್ತರಿಸಿದಲ್ಲಿ ಅಂತಹವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 126ರ ಅನ್ವಯ 2 ವರ್ಷಗಳ ಶಿಕ್ಷೆ ಅಥವಾ ದಂಡ, ಇಲ್ಲವೆ ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಮತದಾನ ಪೂರ್ವ 48 ಗಂಟೆ ಅವಧಿಯಲ್ಲಿ ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮ ಸಂಸ್ಥೆಗಳು ಬಿತ್ತರಿಸುವ ಚುನಾವಣಾ ಸುದ್ದಿಯಲ್ಲಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಪರವಾಗಿರುವ ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ಪ್ಯಾನಲಿಸ್ಟ್ ಅಭಿಪ್ರಾಯಗಳು, ಮನವಿಗಳು ಇಲ್ಲದಿರುವುದುನ್ನು ಖಚಿತಪಡಿಸಿಕೊಳ್ಳಬೇಕು. ಇದಲ್ಲದೆ ಯಾವುದೇ ಅಭಿಪ್ರಾಯ ಸಂಗ್ರಹದ ಫಲಿತಾಂಶ ಪ್ರಕಟ, ವಿಶ್ಲೇಷಣೆ, ಪ್ರದರ್ಶನ ಮಾಡುವುದನ್ನು ಸಹ ನಿರ್ಬಂಧಿಸಲಾಗಿದೆ.

ಎಕ್ಸಿಟ್ ಪೋಲ್ ನಿಷೇಧ: ಮತದಾನದ ಪೂರ್ವ 48 ಗಂಟೆ ಮತ್ತು ಮತದಾನದ ಸಮಯ ಮುಗಿದ ನಂತರದ ಅರ್ಧ ಗಂಟೆ ವರೆಗೂ ಯಾವುದೇ ಸುದ್ದಿ ವಾಹಿನಿ, ಕೇಬಲ್ ಟಿ.ವಿ. ಸೇರಿದಂತೆ ಇನ್ನಿತರ ಡಿಜಿಟಲ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಎಲ್ಲಾ ಮಾಧ್ಯಮ ಸಂಸ್ಥೆಗಳು ಚುನಾವಣಾ ಆಯೋಗವು ಕಾಲ ಕಾಲಕ್ಕೆ ಹೊರಡಿಸುವ ಎಲ್ಲಾ ಮಾರ್ಗದರ್ಶನಗಳನ್ನು ಪಾಲಿಸಬೇಕೆಂದು ಅವರು ತಿಳಿಸಿದ್ದಾರೆ.

emedialine

Recent Posts

ಸಂವಿಧಾನ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ; ಡಾ. ಸಂಧ್ಯಾ ಕಾಣೆಕರ್

ಶಹಾಬಾದ್: ರಾಷ್ಟ್ರೀಯ ಆರೋಗ್ಯ ಅಭಿಹಾನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಮುದಾಯ ಆರೋಗ್ಯ ಕೇಂದ್ರ ಬಸವ ಸಮಿತಿ…

6 mins ago

ಕಲ್ಯಾಣ ಕರ್ನಾಟಕ ಕಾಯಕ ರತ್ನ ರಾಜ್ಯ ಪ್ರಶಸ್ತಿಗೆ ಡಿ.ಪಿ.ಸಜ್ಜನ ಆಯ್ಕೆ

ಕಲಬುರಗಿ: ಹೊನ್ನಕಿರಣಗಿ ಗ್ರಾಮದ ಶ್ರೀ ಕೇತಕಿ ಸಂಗಮೇಶ್ವರ ಶಿಕ್ಷಣ ಟ್ರಸ್ಟ್ ( ರಿ ) ಅಧ್ಯಕ್ಷ ಮತ್ತು ಉಪನ್ಯಾಸಕರಾದ ಡಿ.ಪಿ.ಸಜ್ಜನ…

8 mins ago

ಡಾ. ಗೋ ರು ಚನ್ನಬಸಪ್ಪ ಧಾರವಾಡ ಕಸಾಪದಲ್ಲಿ ಸನ್ಮಾನ

ಧಾರವಾಡ; ಮಂಡ್ಯ ದಲ್ಲಿ ಜರುಗುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆ ಆಗಿರುವ ಡಾ.…

11 mins ago

ಪಕ್ಷಾತೀತವಾಗಿ ಕೋಲಿ ಸಮಾಜದ ಸಂಘಟನೆಯಾಗಲಿ

ಎಂಡಿ ಮಶಾಖ ಚಿತ್ತಾಪುರ ಚಿತ್ತಾಪೂರ: ತಾಲ್ಲೂಕಿನಲ್ಲಿ ಬಹುಸಂಖ್ಯೆಯಲ್ಲಿರುವ ಕೋಲಿ ಸಮಾಜವನ್ನು ಪಕ್ಷಾತೀತವಾಗಿ ಸಂಘಟನೆ ಮಾಡುವುದು ಅತ್ಯಂತ ಅಗತ್ಯವಾಗಿದೆ. ಸಂಘಟನೆ ಸಶಕ್ತವಾದಾಗ…

15 mins ago

ಸೇಡಂನಲ್ಲಿ 24ನೇ ವರ್ಷದ ಅಮ್ಮ ಪ್ರಶಸ್ತಿ ಪ್ರದಾನ: “ಅಮ್ಮ ಹೆಸರಿನಲ್ಲಿ ನೀಡುವ ಪ್ರಶಸ್ತಿ ಶ್ರೇಷ್ಠ”

ಸೇಡಂ: ಜಗತ್ತಿನಲ್ಲಿ ಎರಡು ಸುರಕ್ಷಿತ ಸ್ಥಳ ಅಪ್ಪನ ಹೆಗಲು, ಅಮ್ಮನ ಮಡಿಲು ಹಾಗಾಗಿ ತಾಯಿ, ತಂದೆಯರ ಹೆಸರಿನಲ್ಲಿ ನೀಡುವ ಪ್ರಶಸ್ತಿ…

2 hours ago

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

18 hours ago