ಬಿಸಿ ಬಿಸಿ ಸುದ್ದಿ

ಪ್ರಿಯಾಂಕ್ ಗೆಲುವಿಗಾಗಿ ಉಪವಾಸದ ಮೊರೆ ಹೋದ ಅಭಿಮಾನಿ

ವಾಡಿ: ಚಿತ್ತಾಪುರ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಪ್ರಿಯಾಂಕ್ ಖರ್ಗೆ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂದು ಪ್ರಾರ್ಥಿಸಿ ಅಭಿಮಾನಿಯೋರ್ವ ಉಪವಾಸ ವೃತದ ಮೊರೆ ಹೋಗಿದ್ದಾರೆ. ಪ್ರತಿದಿನವೂ ಮತದಾರರ ಮನೆ ಬಾಗಿಲಿಗೆ ಹೋಗಿ ಪ್ರಿಯಾಂಕ್ ಪರ ಮತದಾನ ಮಾಡುವಂತೆ ವಿನಂತಿಸುತ್ತಿದ್ದಾರೆ.

ಪಟ್ಟಣದ ರೆಸ್ಟ್‍ಕ್ಯಾಂಪ್ ತಾಂಡಾ ನಿವಾಸಿ ಗುರುಪಾದ ದೊಡ್ಡಮನಿ ಎಂಬ ಯುವಕ ಪ್ರಿಯಾಂಕ್ ಖರ್ಗೆ ಅಭಿಮಾನಿಯಾಗಿದ್ದು, ಅವರ ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಮೇ.17 ರಂದು ನಾಮಪತ್ರ ಸಲ್ಲಿಸಿದ ದಿನದಿಂದ ಉಪವಾಸ ವೃತ ಆರಂಭಿಸಿರುವ ಈತ ಮೇ.13 ರಂದು ಫಲಿತಾಂಶ ಪ್ರಕಟವಾಗುವವರೆಗೂ ವೃತ ಮುಂದುವರೆಸುವುದಾಗಿ ಹೇಳಿದ್ದಾರೆ. ಶಾಸಕರಾಗಿ ಮಂತ್ರಿಯಾಗಿ ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದ ಪ್ರಗತಿಗಾಗಿ ದುಡಿದ್ದಾರೆ.

ಮನೆಯಲ್ಲಿ ಕುಳಿತರೂ ಅವರು ಗೆಲ್ಲಬಹುದಾದಷ್ಟು ಅಭಿವೃದ್ಧಿ ಮಾಡಿದ್ದಾರೆ. ಆದರೂ ಬದಲಾದ ರಾಜಕೀಯ ಪರಸ್ಥಿತಿಯಲ್ಲಿ ಬಿಜೆಪಿ ಓರ್ವ ರೌಡಿ ಶೀಟರ್‍ನನ್ನು ಕಣಕ್ಕಿಳಿಸಿದೆ. ಸುಳ್ಳು ಗೊಳ್ಳೊ ಪ್ರಚಾರ ಮಾಡಿ ಖರ್ಗೆ ಅವರನ್ನು ಸೋಲಿಸುವ ತಂತ್ರ ರೂಪಿಸಿದೆ. ಅಭಿವೃದ್ಧಿ ಚಿಂತಕನ ಗೆಲುವು ಕ್ಷೇತ್ರದ ಜನರ ಗೆಲುವಾಗಲಿದೆ. ಅನೈತಿಕ ರಾಜಕಾರಣಕ್ಕೆ ಪ್ರಿಯಾಂಕ್ ಖರ್ಗೆ ಬಲಿಯಾಗಬಾರದು ಎಂಬ ಕಾರಣಕ್ಕೆ ಉಪವಾಸ ವೃತದ ಮೊರೆ ಹೋಗಿದ್ದೇನೆ.

ಮೇ.13 ರಂದು ಪ್ರಿಯಾಂಕ್ ಅವರ ಗೆಲುವು ಘೋಷಣೆಯಾಗುತ್ತಿದ್ದಂತೆ ಗತ್ತರಗಿ ಭಾಗ್ಯವಂತಿ ದೇವಿಯ ದೇವಸ್ಥಾನಕ್ಕೆ ತೆರಳುತ್ತೇನೆ. ಗಂಗಾಸ್ನಾನ ಗೈದು ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ಕೊನೆಗೊಳಿಸುತ್ತೇನೆ ಎಂದು ಖರ್ಗೆ ಅಭಿಮಾನಿ ಗುರುಪಾದ ಪ್ರತಿಕ್ರೀಯಿಸಿದ್ದಾರೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

6 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

6 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

8 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

8 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

8 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

9 hours ago