ಲೈಂಗಿಕ ದೌರ್ಜನ್ಯದ ವಿರುದ್ದ ಮಹಿಳಾ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಜನವಾದಿ ಮಹಿಳಾ ಸಂಘಟನೆ ಬೆಂಬಲ.
ಕಲಬುರಗಿ: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಇರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ನನ್ನು ಬಂಧಿಸಲು ಒತ್ತಾಯಿಸಿ ಅಂತರರಾಷ್ಟ್ರೀಯ ಪದಕ ವಿಜೇತ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟವನ್ನು ಜನವಾದಿ ಮಹಿಳಾ ಸಂಘಟನೆ ಬೆಂಬಲಿಸುತ್ತದೆ ಮತ್ತು ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ನಾಳೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ವತಿಯಿಂದ ರಾಜ್ಯದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಭಾರತದಲ್ಲಿ ಮೋದಿಯ ಭೇಟಿ ಬಚಾವೋ ಭೇಟಿ ಪಡಾವೋ ಎಂಬುದು ನಾಟಕವಾಗಿದೆ. ಬ್ರಿಜ್ ಭೂಷಣ್ ಸಿಂಗ್ ಮತ್ತು ಕೆಲವು ಕುಸ್ತಿ ತರಬೇತುದಾರರು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಂಡು ನ್ಯಾಯ ದೊರೆಕಿಸಿಕೊಡಿ ಎಂದು ಕುಸ್ತಿಪಟುಗಳು ಕೇಂದ್ರದ ಗೃಹ ಮಂತ್ರಿ ಅಮಿತ್ ಶಾರನ್ನು ಭೇಟಿ ಮಾಡಿ ದೂರು ನೀಡಿದರು ಏನೂ ಕ್ರಮ ಜರುಗಿಸಿಲ್ಲ. ಕ್ರೀಮಿನಲ್ ಹಿನ್ನೆಲೆ ಇರುವ ಬಿಜೆಪಿಯ ಉತ್ತರ ಪ್ರದೇಶದ ಸಂಸದ ಬ್ರಿಜ್ ಭೂಷಣ್ ಶರಣ್ ರನ್ನು ಮೋದಿ, ಅಮಿತ್ ಶಾ ಹಾಗೂ ಯೋಗಿ ಆದಿತ್ಯ ನಾಥ್ ರು ರಕ್ಷಿಸುತ್ತಿದ್ದಾರೆ ಎಂದು ಸಂಘಟನೆಯ ನಾಯಕಿ ಮೀನಾಕ್ಷಿ ಬಾಳಿ ದೇವಿ ಆರೋಪಿಸಿದ್ದಾರೆ.
ಇದನ್ನು ವಿರೋಧಿಸಿ ನ್ಯಾಯಕ್ಕಾಗಿ ನವದೆಹಲಿಯ ಜಂತರ್ ಮಂತರ್ ನಲ್ಲಿ ಪ್ರಖ್ಯಾತ ಕುಸ್ತಿಪಟುಗಳಾದ ವೀನೆಸ್ ಪೋಗಾಟೆ , ಬಜರಂಗ್ ಪುನಿಯಾ, ಸಾಕ್ಷಿ ಮಲ್ಲಿಕ್, ನೇತೃತ್ವದಲ್ಲಿ ಮಳೆ ಗಾಳಿ ಚಳಿ ಬಿಸಿಲನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸುತ್ತಿದ್ದಾರೆ. ದೌರ್ಜನ್ಯಕ್ಕೆ ಒಳಗಾದ ಕುಸ್ತಿಪಟುಗಳು ಪೊಲೀಸ್ ಠಾಣೆಗೆ ದೂರು ನೀಡಿದರು ಅವರ ಮೇಲೆ
ಎಫ್. ಐ. ಆರ್ .ದಾಖಲಿಸಲಿಲ್ಲ. ಸುಪ್ರೀಂಕೋರ್ಟ್ ನಿರ್ದೇಶನ ನೀಡಿದ ಮೇಲಷ್ಟೇ ಎಫ್. ಐ .ಅರ್. ದಾಖಲಿಸಿದ್ದಾರೆ.
ಆದರೆ ಬ್ರಿಜ್ ಭೂಷಣ್ ಜೊತೆಗೆ ಹರಿಯಾಣದ ಕ್ರೀಡಾ ಸಚಿವ ಸಂದೀಪ್ ಸಿಂಗ್ ವಿರುದ್ಧ ಕಿರಿಯ ಮಹಿಳಾ ಕೋಚ್ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ದೂರು ನೀಡಿದ್ದಾರೆ ಇವರನ್ನು ಬಿಜೆಪಿ ಸರ್ಕಾರ ರಕ್ಷಿಸುತ್ತಿದೆ. ಇಂತಹ ಘಟನೆಯಿಂದ ಭಾರತ ತಲೆತಗ್ಗಿಸುವಂತೆ ಆಗಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿಯ ದೌರ್ಜನ್ಯ ಅನಿಯಂತ್ರಿತವಾಗಿ ನಡೆಯುತ್ತಿದೆ. ಅಪರಾಧಿಗಳು, ಸಮಾಜ ಘಾತುಕರು ಗಳ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಪ್ರಜ್ಞಾವಂತ ನಾಗರಿಕರು ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಸಂದೀಪ್ ಸಿಂಗ್ ರವರನ್ನು ಬಂಧಿಸಿ ಅವರನ್ನು ಜವಾಬ್ದಾರಿ ಸ್ಥಾನದಿಂದ ವಜಾ ಮಾಡಲು ಕೇಂದ್ರದ ಒಕ್ಕೂಟ ಸರಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ಸಹಿ ಸಂಗ್ರಹ ನಡೆಸುತ್ತಿದೆ.
ಬೇಟಿ ಬಚಾವ್ ಬೇಟಿ ಪಡಾವ್ ಎಂದು ಘೋಷಣೆ ಕೊಟ್ಟು ,ಹಗಲಿರುಳೂ ಸಬ್ ಕಾ ಸಾತ್ ಸಬಕಾ ವಿಕಾಸ್ ಎಂದು ಜಪ ಮಾಡುವ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ಗೃಹಮಂತ್ರಿ ಅಮಿತ್ ಶಾ ರವರು
ದೇಶದ ಬೇಟಿಯರ ಮೇಲೆ ನಡೆದ ಅನ್ಯಾಯದ ಬಗ್ಗೆ ಕಿಂಚಿತ್ತೂ ತಲೆ ಕೆಡಿಸಿಕೊಳ್ಳದೇ ಕರ್ನಾಟಕದ ಚುನಾವಣೆಯ ರೋಡ್ ಶೋಗಳಲ್ಲಿ ನಿರತರಾಗಿದ್ದಾರೆ.
ಈ ಕೂಡಲೇ ಬಿ.ಜೆ.ಪಿ.ಸಂಸದ ಬ್ರಿಜ್ ಭೂಷಣ್ ಸಿಂಗ್ ರವರ ನ್ನು ಬಂಧಿಸಬೇಕೆಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದೆ.