ನಾಳೆ ಸಂಜೆ 6 ಗಂಟೆಯಿಂದ ಬಹಿರಂಗ ಪ್ರಚಾರ ಅಂತ್ಯ

0
25

ಕಲಬುರಗಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಇದೇ ಮೇ 10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಚುನಾವಣಾ ಬಹಿರಂಗ ಪ್ರಚಾರವು ಮೇ 8ರ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಅವರು ಆದೇಶ ಹೊರಡಿಸಿದ್ದಾರೆ.

ಹೀಗಾಗಿ ಮೇ 8ರ ಸಂಜೆ 6 ಗಂಟೆ ನಂತರ ಯಾವುದೇ ರಾಜಕೀಯ ಪಕ್ಷಗಳು ಮತ್ತು ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಅವರ ಚುನಾವಣಾ ಏಜೆಂಟ್‍ಗಳು ಮತ್ತು ಬೆಂಬಲಿಗರು ಬಹಿರಂಗ ಪ್ರಚಾರ ನಡೆಸುವುದನ್ನು ನಿರ್ಬಂಧಿಸಲಾಗಿದೆ. ಮನೆ ಮನೆಗೆ ತೆರಳಿ ಮತಯಾಚಿಸುವುದನ್ನು ಮತ್ತು ಕರಪತ್ರಗಳನ್ನು ವಿತರಿಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಆದರೆ ಪ್ರಜಾಪ್ರತಿನಿಧಿ ಕಾಯ್ದೆ-1951 ಮತ್ತು ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.

Contact Your\'s Advertisement; 9902492681

ಮತದಾರರಲ್ಲದವರು ಕ್ಷೇತ್ರ ಬಿಡಬೇಕು. ಮತದಾನ ಪೂರ್ವ 48 ಗಂಟೆ ಅವಧಿಯಲ್ಲಿ ಕ್ಷೇತ್ರದ ಮತದಾರರಲ್ಲದವರು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು. ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು/ಹೋಟೆಲ್‍ಗಳು ಮತ್ತು ಅತಿಥಿಗೃಹಗಳನ್ನು ವಾಸ್ತವ್ಯ ಹೊಡಿದವರ ಪಟ್ಟಿಗಳ ಪರಿಶೀಲನೆ ಮಾಡಿ ಮತದಾರರಲ್ಲದವರನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಅಧಿಕಾರಿಗಳು ಕ್ರಮವಹಿಸಬೇಕು. ತಪ್ಪಿದಲ್ಲಿ ಭಾರತೀಯ ದಂಡ ಸಂಹಿತೆಯ 188ರ ಪ್ರಕಾರ ಕ್ರಮ ಜರುಗಿಸಲಾಗುತ್ತದೆ.

ಈ ಆದೇಶವನ್ನು ಕಲಬುರಗಿ ನಗರ ಪೊಲೀಸ್ ಆಯುಕ್ತರು ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರು ಕಟ್ಟುನಿಟ್ಟಾಗಿ ಅನುಷ್ಟಾನಕ್ಕೆ ತರಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here