ಬಿಸಿ ಬಿಸಿ ಸುದ್ದಿ

ಮತಗಟ್ಟೆ ಕೇಂದ್ರಗಳ ಸುತ್ತಲೂ ನಿರ್ಬಂಧಿತ ಪ್ರದೇಶ ಎಂದು ಘೋಷಣೆ

ಕಲಬುರಗಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತದಾನವು ಇದೇ ಮೇ 10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮೇ 8ರ ಸಂಜೆ 6 ಗಂಟೆಯಿಂದ ಮೇ 10 ರಂದು ಮತದಾನವು ಮುಕ್ತಾಯವಾಗುವವರೆಗೆ ಕಲಬುರಗಿ ಜಿಲ್ಲೆಯಾದ್ಯಂತ ಸ್ಥಾಪಿಸಲಾಗಿರುವ ಮತಗಟ್ಟೆ ಸುತ್ತಮುತ್ತ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ-1973ರ ಕಲಂ 144 ರನ್ವಯ ಕೆಲವೊಂದು ಷರತ್ತು ವಿಧಿಸಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಅವರು ಆದೇಶ ಹೊರಡಿಸಿದ್ದಾರೆ.

ಕಲಬುರಗಿ ನಗರ ಮತ್ತು ಜಿಲ್ಲೆಯ ವ್ಯಾಪ್ತಿಯ ಮತಗಟ್ಟೆ ಸುತ್ತಮುತ್ತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ-ಸಮಾರಂಭ ಜರುಗಿಸುವುದನ್ನು ನಿμÉೀಧಿಸಿದೆ. ಚುನಾವಣಾ ಅಭ್ಯರ್ಥಿ ಮತ್ತು ಬೆಂಬಲಿಗರು 5 ಜನರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸೇರಬಾರದು. ಮತಗಟ್ಟೆ 100 ಮೀಟರ್ ವ್ಯಾಪ್ತಿಯಲ್ಲಿ ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

ಮತಗಟ್ಟೆಗೆ ಕಲ್ಲುಗಳನ್ನು, ಖಾರ ಪದಾರ್ಥ ಇಲ್ಲವೆ ಸ್ಪೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿμÉೀಧಿಸಲಾಗಿದೆ. ಅಲ್ಲದೆ ಕಲ್ಲುಗಳನ್ನು ಮತ್ತು ಎಸೆಯುವಂಥಹ ವಸ್ತುಗಳನ್ನು ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಮನುಷ್ಯನ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ/ದಹನ ಮಾಡುವುದನ್ನು ಸಹ ಪ್ರತಿಬಂಧಿಸಲಾಗಿದೆ.

ಮತಗಟ್ಟೆ ಸುತ್ತಮುತ್ತ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ಸಹ ನಿμÉೀಧಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶಿಸಿದ್ದಾರೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು, ಮುಂತಾದವುಗಳನ್ನು ಪ್ರದರ್ಶಿಸುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿμÉೀಧಿಸಲಾಗಿದೆ.

ಯಾವುದೇ ವ್ಯಕ್ತಿ ಬಹಿರಂಗವಾಗಿ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದನ್ನು ಕಂಡುಬಂದಲ್ಲಿ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೆÇಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದಿದ್ದಾರೆ.

ಈ ಆದೇಶ ಉಲ್ಲಂಘಿಸಿದಲ್ಲಿ ಭಾರತೀಯ ದಂಡ ಸಂಹಿತೆ 188ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವ ಜಿಲ್ಲಾಧಿಕಾರಿಗಳು, ಈ ಆದೇಶವು ಮತದಾನ ಸಿಬ್ಬಂದಿ-ಅಧಿಕಾರಿಗಳಿಗೆ, ಪೆÇಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

100 ಮೀಟರ್ ಒಳಗೆ ಪ್ರಚಾರ ನಿಷೇಧ: ಮತಗಟ್ಟೆಗಳ 100 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದ್ದು, ಈ ಪರಿಮಿತಿಯಲ್ಲಿ ಯಾವುದೇ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್ ಅಥವಾ ಇನ್ಯಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಝೆರಾಕ್ಸ ಅಂಗಡಿ, ಬುಕ್ಸ್ ಸ್ಟಾಲ್ ಹಾಗೂ ಸೈಬರ್ ಕೆಫೆಗಳಿಗೂ ನಿರ್ಬಂಧಿಸಲಾಗಿದ್ದು, ಧ್ವನಿವರ್ಧಕ ಸಹ ಬಳಸುವಂತಿಲ್ಲ.

ಧಾರ್ಮಿಕ ಕಾರ್ಯಗಳಿಗೆ ತೊಂದರೆಯಿಲ್ಲ: ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್-19 ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರಣಿಗೆಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ಕೋವಿಡ್ ಮಾರ್ಗಸೂಚಿ-ನಿಯಮಗಳನ್ನು ಪಾಲಿಸಬೇಕು.

ಮೊಬೈಲ್ ನಿಷೇಧ: ಚುನಾವಣಾ ಕಾರ್ಯದಲ್ಲಿ ನಿರತ ಜಿಲ್ಲಾ ಚುನಾವಣಾಧಿಕಾರಿ, ಚುನಾವಣಾಧಿಕಾರಿ ಹಾಗೂ ಅವರಿಂದ ಅನುಮತಿ ಪಡೆದ ಅಧಿಕಾರಿಗಳು-ಸಿಬ್ಬಂದಿಗಳು ಹೊರತುಪಡಿಸಿ ಮತಗಟ್ಟೆಗಳ ಸುತ್ತಲೂ 100 ಮೀಟರ್ ಅಂತರದಲ್ಲಿ ಮೊಬೈಲ್ ಫೆÇೀನ್, ಕಾರ್ಡಲೆಸ್ ಫೆÇೀನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

19 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago