ಶಹಾಬಾದ: ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಮತ್ತಿಮಡು ಪರ ಅವರ ಪತ್ನಿ ಜಯಶ್ರೀ ಮತ್ತಿಮಡು ಅವರು ನಗರದ ವಿವಿಧ ವಾರ್ಡಗಳಲ್ಲಿ ಮನೆ ಮನೆಗೆ ತೆರಳಿ ಪತಿಯ ಪರ ಮತಯಾಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಯಶ್ರೀ ಮತ್ತಿಮಡು, ನನ್ನ ಪತಿ ಕಳೆದ ಐದು ವರ್ಷಗಳಲ್ಲಿ ಹಿದೆಂದೂ ಕಾಣದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಮತಕ್ಷೇತ್ರದಲ್ಲಿ ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮಹತ್ವದ ಯೋಜನೆಗಳ ಅನುμÁ್ಠನಕ್ಕೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದಾರೆ. ಅಲ್ಲದೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಬದಲಾವಣೆಗೆ ಶ್ರಮಿಸಿದ್ದಾರೆ.
ಚುನಾವಣೆಯಲ್ಲಿ ಮತದಾರರು ಮತ್ತೊಮ್ಮೆ ಅವಕಾಶ ನೀಡಬೇಕೆಂದು ಮನವಿ ಮಾಡಿದರಲ್ಲದೇ, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಅದರ ಲಾಭ ಕೂಡ ಜನರಿಗೆ ತಲುಪಿಸಲಾಗಿದೆ. ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಮತದಾರರು ಬಿಜೆಪಿಯನ್ನು ಬೆಂಬಲಿಸಬೇಕೆಂದು ತಿಳಿಸಿದರು.
ಆನರ ಸಮಸ್ಯೆಗಳನ್ನು ಆಲಿಸುವ ಮತ್ತು ಸ್ಪಂದಿಸುವ ಮೂಲಕ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅನೇಕ ಕಾರ್ಯಗಳನ್ನು ಮಾಡಲಾಗಿದೆ.ಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ಚಾಚಿದ್ದೆವೆ.ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಂಡಿದ್ದೆವೆ.ಜನರ ಬಳಿಯೇ ಹೋಗಿ ಸಮಸ್ಯೆಗಳನ್ನು ಆಲಿಸಿದ್ದೆವೆ. ಮತಕ್ಷೇತ್ರದ ಪ್ರತಿ ಗ್ರಾಮಕ್ಕೆ ಸುಮಾರು ಬಾರಿ ಬೇಟಿ ನೀಡಿದ್ದೆವೆ. ಅವರ ಸು:ಖ- ದು:ಖಗಳಲ್ಲಿ ಪಾಲ್ಗೊಂಡಿದ್ದೆವೆ.ಆದ್ದರಿಂದ ಈ ಬಾರಿ ನನ್ನ ಪತಿಯನ್ನು ಮತ್ತೊಮ್ಮೆ ಅವಕಾಶ ನೀಡುವ ಮೂಲಕ ಪ್ರಚಂಡ ಮತಗಳಿಂದ ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.
ಭಾಗಿರಥಿ ಗುನ್ನಾಪೂರ, ಜ್ಯೋತಿ ಶರ್ಮಾ, ಸುನೀತಾ,ಲಕ್ಷ್ಮಿಬಾಯಿ ರಾವೂರ, ಸುಸುಲಾಬಾಯಿ ರಾಠೋಡ,ರೇಣುಕಾ ರಾಠೋಡ, ಶಶಿಕಲಾ ಸಜ್ಜನ್, ಅವಿನಾಶ,ದತ್ತಾ ಫಂಡ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…