ಕಲಬುರಗಿ: ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯ ಕಲಬುರಗಿ ರಾಷ್ಟ್ರೀಯ ಸೇವಾ ಯೋಜನೆ ಅ ಮತ್ತು ಬ ಘಟಕ ಹಾಗೂ ಎನ್.ಸಿ.ಸಿ ಘಟಕಗಳು ಮತ್ತು ಜಿಲ್ಲಾ ಸ್ವೀಪ್ ಸಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಮತದಾನ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಜಾಥಾಕ್ಕೆ ಕಲಬುರಗಿ ಜಿಲ್ಲಾ ಪಂಚಾಯತ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗಿರೀಶ ಬದೋಲೆ ಅವರು ಚಾಲನೆ ನೀಡಿದರು ಸ್ವೀಪ ಸಮಿತಿಯ ರಾಯಬಾರಿ ಹಾಗೂ ಹಾಸ್ಯ ಕಲಾವಿದೆ ಇಂದುಮತಿ ಸಾಲಿಮಠ ಮತದಾನದ ಮಹತ್ವ ಕುರಿತು ಹಾಡುಗಳನ್ನು ಹಾಡುವದರ ಮೂಲಕ ಮನಮುಟ್ಟುವಂತೆ ಮಾತನಾಡಿದರು.
ಇದೇ ಸಂಧರ್ಭದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ವಿದ್ಯಾರ್ಥಿನಿಯರಿಗೆ ಮತದಾನದ ಪ್ರತಿಜ್ನಾವಿಧಿಯನ್ನು ಬೋಧಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ರಾಜೇಂದ್ರ ಕೊಂಡಾ ವಹಿಸಿದ್ದರು ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಡಾ.ಮಹೇಶ ಗಂವ್ಹಾರ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ಅಧಿಕಾರಿಗಳಾದ ಡಾ.ರೇಣುಕಾ ಹಾಗರಗುಂಡಿಗಿ,ಎನ್.ಸಿ.ಸಿ.ಅಧಿಕಾರಿ ಶ್ರೀಮತಿ ಉಮಾ ಪಾಟೀಲ ಹಾಗೂ ಮಹಾವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿ ವರ್ಗ ವಿದ್ಯಾರ್ಥಿನಿಯರು ಹಾಜರಿದ್ದರು.