ಬೆಂಗಳೂರು; ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023 ರ ಮತದಾನ ಮೇ 10 ರಂದು ನಿಗದಿಯಾಗಿದ್ದು, ಕರ್ನಾಟಕದಲ್ಲಿ ಚುನಾವಣೆಯನ್ನು, ಪ್ರಜಾಪ್ರಭುತ್ವದ ಹಬ್ಬದಂತೆ ಆಚರಿಸಲಾಗುತ್ತಿದೆ. ಕಳೆದ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ಮಾದರಿಯಲ್ಲಿ ಈ ಬಾರಿಯು ಸಹ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023ರ ಅಂಗವಾಗಿ ಮಾಧ್ಯಮಗಳಲ್ಲಿ ಕಾರ್ಯನಿವರ್ಹಿಸುತ್ತಿರುವ ಮತ್ತು ಹವ್ಯಾಸಿ ಪತ್ರಿಕಾ ಛಾಯಾಗ್ರಹಕರಿಗಾಗಿ ಮತದಾನದ ವಿಷÀಯದ ಬಗ್ಗೆ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಲೋಕಸಭಾ ಚುನಾವಣೆ 2019ರಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ಮೂಲಕ ಚುನಾವಣಾ ಸಂಬಂಧಿತ ಅತ್ಯುತ್ತಮ ಹಾಗೂ ಸಂಗ್ರಹಯೋಗ, ಛಾಯಾಚಿತ್ರಗಳನ್ನು ಕೇಂದ್ರ ಚುನಾವಣಾ ಆಯೋಗ ಪ್ರಶಂಸಿವುದರ ಜೊತೆಗೆ, ತನ್ನ ವರದಿ ಹಾಗೂ ಪುಸ್ತಕಗಳ ಮುಖಪುಟಗಳಲ್ಲಿ ಬಳಸಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ 2023 ನಿಮಿತ್ತರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಿ, ಅತ್ಯುತ್ತಮ ಛಾಯಾಚಿತ್ರ ತೆಗೆದ ಛಾಯಾಗ್ರಾಹಕರಿಗೆ ಪುಮಾಣ ಪತ್ರ ಹಾಗೂ ನಗದು ಬಹುಮಾನವನ್ನು ನೀಡಲಾಗುತ್ತಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವ ಪತ್ರಿಕಾ ಛಾಯಾಗ್ರಾಹಕರು / ಹವ್ಯಾಸಿ ಛಾಯಾಗ್ರಹಕರು ತಾವು ತೆಗೆದ ಗರಿಷ್ಠ 5 ಅತ್ಯುತ್ತಮ ಛಾಯಾಚಿತ್ರಗಳನ್ನು ಸೂಕ್ತ ಶೀರ್ಷಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಪತ್ರಿಕಾ ಮಾನ್ಯತಾ ಕಾರ್ಡ್ ಅಥವಾ ತಮ್ಮ ಮಾಧ್ಯಮ ಕಚೇರಿ ನೀಡಿರುವ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಹಾಗೂ ಮನ ವಿಳಾಸ, ಮೋಬೈಲ್ ಸಂಖ್ಯೆ ಸೇರಿದಂತೆ ಮತ್ತಿತರ ವಿವರಗಳನ್ನು ಇ-ಮೇಲ್ ಐಡಿ : ktkceomedia2023@gmail.com ಸಲ್ಲಿಸುವುದು. ಸಲ್ಲಿಕೆಗಳನ್ನು ದಿನಾಂಕ: 20-05-2023 ರಂದು ಶನಿವಾರ ಸಂಜೆ 5 ಗಂಟೆಯೊಳಗೆ ಇ-ಮೇಲ್ ಮೂಲಕ ಸಲ್ಲಿಸಲು ಈ ಮೂಲಕ ತಿಳಿಸಲಾಗಿದೆ.
ಆಯ್ಕೆಯಾಗುವ ಛಾಯಾಚಿತ್ರಗಳಿಗೆ ಪಥಮ ಬಹುಮಾನ ರೂ. 25,000/- ದ್ವಿತೀಯ ಬಹುಮಾನ 15,000/- ತೃತೀಯ ಬಹುಮಾನ 10,000/- ಹಾಗೂ ಸಮಾಧಾನಕರ ಬಹುಮಾನ 6,000/- ಮತ್ತು ವಿಶೇಷ ಬಹುಮಾನ 5,000/- ಒಟ್ಟು ಬಹುಮಾನದ ಮೊತ್ತ – 61,000/- ಒಳಗೊಂಡಿರುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತರ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…