ಬಿಸಿ ಬಿಸಿ ಸುದ್ದಿ

ದಾದಿಯರು ಸಮಾಜ-ಆರೋಗ್ಯ ಕ್ಷೇತ್ರದ ಸೇತುವೆಯಾಗಿ ಕಾರ್ಯನಿರ್ವಹಣೆ

ಕಲಬುರಗಿ: ವೈದ್ಯಕೀಯ ಕ್ಷೇತ್ರದ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಿ, ಸದೃಢ ರಾಷ್ಟ್ರ ನಿರ್ಮಾಣದಲ್ಲಿ ದಾದಿಯರ ಕೊಡುಗೆ ಅನನ್ಯವಾಗಿದೆ. ಸಮಾಜ-ಆರೋಗ್ಯ ಕ್ಷೇತ್ರದ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಾರೆ. ರೋಗಿಯ ಜೊತೆ ನಿರಂತರವಾಗಿದ್ದು, ಉಪಚಾರ ಮಾಡುವ ಮೂಲಕ ರೋಗವನ್ನು ಗುಣಪಡಿಸುತ್ತಾರೆ. ಅವರ ಸೇವೆಯನ್ನು ಕಾಯಂಗೊಳಿಸಿ, ಅವರಿಗೆ ದೊರೆಯಬೇಕಾದ ಸೌಲಭ್ಯಗಳನ್ನು ನೀಡಬೇಕಾದದ್ದು ಸರ್ಕಾರದ ಕರ್ತವ್ಯವಾಗಿದ್ದು, ಇದರತ್ತ ಲಕ್ಷವಹಿಸಬೇಕಾಗಿದೆ ಎಂದು ಮಕ್ತಂಪುರ ಗುರುಬಸವ ಮಠದ ಪೂಜ್ಯ ಶಿವಾನಂದ ಶ್ರೀಗಳು ಹೇಳಿದರು.

ನಗರದ ಶೇಖ್‍ರೋಜಾದಲ್ಲಿರುವ ಶಹಬಜಾರ ‘ನಗರ ಪ್ರಾಥಮಿಕ ಆರೋಗ್ಯ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಶುಕ್ರವಾರ ಏರ್ಪಡಿಸಲಾಗಿದ್ದ ‘ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ’ಯ ಪ್ರಯುಕ್ತ ಆರೋಗ್ಯ ಕೇಂದ್ರದ ಎಲ್ಲಾ ದಾದಿಯರಿಗೆ ಏರ್ಪಡಿಸಿದ್ದ ಗೌರವಿಸಿ ಅವರು ಮಾತನಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಳಗದ ಅಧ್ಯಕ್ಷ, ಉಪನ್ಯಾಸಕ ಎಚ್.ಬಿ.ಪಾಟೀಲ, ದಾದಿಯರ ಸೇವೆ ನಿರಂತರ ಮತ್ತು ಜವಬ್ದಾರಿಯುತವಾಗಿದೆ. ಪ್ರತಿ ವರ್ಷ ‘ಮೇ-12’ನ್ನು ‘‘ವಿಶ್ವ ದಾದಿಯರ ದಿನಾಚರಣೆ’’ಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ವಿಶ್ವದ್ಯಾದಂತ ಸೇವೆ ಸಲ್ಲಿಸುತ್ತಿರುವ ದಾದಿಯರನ್ನು ಸ್ಮರಿಸುವ ಉದ್ದೇಶವಾಗಿದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನ ಇದಾಗಿದ್ದು, ಅವರು ಆಧುನಿಕ ನರ್ಸಿಂಗ್ ಶಿಕ್ಷಣಕ್ಕೆ ಬುನಾದಿಯನ್ನು ಹಾಕಿ ಸಂಘಟನೆಯನ್ನು ಮಾಡಿದ್ದಾರೆ. ನೈಟಿಂಗೇಲ್ ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ ಎಂದರು.

ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಆರೋಗ್ಯ ಕೇಂದ್ರದ ದಾದಿಯರಾದ ಗಂಗಾಜ್ಯೋತಿ ಗಂಜಿ, ಲಕ್ಷ್ಮೀ ಮೈಲಾರಿ, ಮಂಗಲಾ ಚಂದಾಪುರೆ, ಚಂದಮ್ಮ ಮರಾಠಾ, ರೇಶ್ಮಾ ನಕ್ಕುಂದಿ, ಅರ್ಚನಾ ಸಿಂಗೆ ಅವರಿಗೆ ಕೇಂದ್ರದಲ್ಲಿ ಸತ್ಕರಿಸಿ, ಶುಭಾಷಯ ಕೋರಲಾಯಿತು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಡಾ.ಅನುಪಮಾ ಎಸ್.ಕೇಶ್ವಾರ, ಡಾ.ಸುನೀಲಕುಮಾರ ಎಚ್.ವಂಟಿ, ಶಿವಯೋಗಪ್ಪ ಬಿರಾದಾರ, ಪರಮೇಶ್ವರ ಬಿ.ದೇಸಾಯಿ, ಬಸಯ್ಯಸ್ವಾಮಿ ಹೊದಲೂರ, ದೇವೇಂದ್ರಪ್ಪ ಗಣಮುಖಿ, ಬಸವರಾಜ ಗುತ್ತೇದಾರ, ಪುಷ್ಪಾ ಆರ್.ರತ್ನಹೊನ್ನದ್, ನಾಗೇಶ್ವರಿ ಮುಗಳಿವಾಡಿ, ಜಗನಾಥ ಗುತ್ತೇದಾರ, ಗುರುರಾಜ ಕೈನೂರ್, ಶರಣಬಸಪ್ಪ ಪೂಜಾರಿ, ಮಲ್ಲಿಕಾರ್ಜುನ ಕಾಕಂಡಕಿ, ಕಿರಣ ಪಾಟೀಲ, ನಾಗಮ್ಮ ಚಿಂಚೋಳಿ ಸೇರಿದಂತೆ ಇನ್ನಿತರರು ಇದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

11 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

13 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

16 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

1 hour ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago