ಸುರಪುರ: ನಗರದ ನ್ಯಾಯಾಲಯದ ಬಳಿಯಲ್ಲಿ 3 ಕೋಟಿ ರೂಪಾಯಿಗಳ ಅನುದಾನದಲ್ಲಿ ನಿರ್ಮಿಸಿರುವ ನ್ಯಾಯಾಧೀಶರ ವಸತಿ ಗೃಹಗಳ ಉದ್ಘಾಟನ ಕಾರ್ಯಕ್ರಮ ನಡೆಸಲಾಯಿತು.
ವಸತಿ ಗೃಹಗಳ ಉದ್ಘಾಟಿಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್ ದಿನೇಶಕುಮಾರ ಅವರು ಮಾತನಾಡಿ, ಇಂದು ನಮ್ಮ ದೇಶದ ವಿವಿಧ ನ್ಯಾಯಾಲಯಗಳಲ್ಲಿ 4ಕೋಟಿ ಪ್ರಕರಣಗಳು ಬಾಕಿ ಉಳಿದಿದ್ದು ಇದರಿಂದಾಗಿ ನ್ಯಾಯಾಂಗ ಇಲಾಖೆಯ ಮೇಲೆ ಬಾಕಿ ಪ್ರಕರಣಗಳ ಹೊರೆ ಬಹಳಷ್ಟಿದೆ ಈ ಹೊರೆಯನ್ನು ಕಡಿಮೆಗೊಳಿಸಲು ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸುವುದು ಅವಶ್ಯಕ ಈ ನಿಟ್ಟಿನಲ್ಲಿ ವಕೀಲರು ಪ್ರಮುಖ ಪಾತ್ರ ವಹಿಸಿ ಮುಂದೆ ಬರಬೇಕು ಎಂದರು.
ವಕೀಲರಿಗೆ ಸಮಾಜದಲ್ಲಿ ಒಂದು ವಿಶೇಷವಾದ ಸ್ಥಾನ ಇದೆ ವಕೀಲರು ಹಾಗೂ ನ್ಯಾಯಾಧೀಶರು ನ್ಯಾಯಾಂಗ ವ್ಯವಸ್ಥೆಯ ಅವಿಭಾಜ್ಯ ಅಂಗ ಇಬ್ಬರೂ ಸೌಹಾರ್ದತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದ ಅವರು 3 ಮತ್ತು 5 ವರ್ಷ ಬಾಕಿ ಇರುವ ಪ್ರಕರಣಗಳನ್ನು ವಿಶೇಷವಾಗಿ ಮೋಟಾರ ವೆಹಿಕಲ್, ಸಿವಿಲ್ ದಾವೆ ಕೇಸ್‍ಗಳು ಬಾಕಿ ಉಳಿಯದಂತೆ ಮಾಡಲು ಇಂತಹ ಕೇಸ್‍ಗಳನ್ನು 89 ಸೆಕ್ಷನ್ ಅಡಿ ಇತ್ಯರ್ಥಪಡಿಸಲು ವಕೀಲರು ಆಲೋಚನೆ ಮಾಡಿ ಎಂದು ಕಿವಿ ಮಾತು ಹೇಳಿದ ಅವರು ಈ ಪ್ರಕರಣಗಳು ತ್ವರಿತಾಗಿ ಇತ್ಯರ್ಥಗೊಳ್ಳುವದರಿಂದ ಕಕ್ಷಿದಾರರಿಗೆ ಅನುಕೂಲವಾಗುವದಲ್ಲದೆ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಹಾಗೂ ಸಮಾಜದಲ್ಲಿ ಜನರ ಮಧ್ಯೆ ಸಂಬಂಧಗಳು ಗಟ್ಟಿಯಾಗಿ ಉಳಿದುಕೊಳ್ಳುತ್ತವೆ ಎಂದರು.
ದೇಶದಲ್ಲಿ ನ್ಯಾಯಾಲಯಗಳ ಮೇಲೆ ಜನರಿಗೆ ಅಪಾರ ವಿಶ್ವಾಸವಿದ್ದು ಅದನ್ನು ಉಳಿಸಿಕೊಂಡು ಹೋಗುವುದು ಎಲ್ಲರ ಜವಾಬ್ದಾರಿ ಎಂದು ಹೇಳಿದರು, ಸರಕಾರ ಈಗ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದು ಸುರಪುರದಲ್ಲಿ ಕೋರ್ಟನ ಸಮೀಪದಲ್ಲಿ ಉತ್ತಮವಾದ ಪರಿಸರ ಮಾಲಿನ್ಯಮುಕ್ತ ವಾತಾವರಣದಲ್ಲಿ ನ್ಯಾಯಾಧೀಶರಿಗೆ ವಸತಿ ಗೃಹಗಳನ್ನು ನಿರ್ಮಿಸಿ ಉತ್ತಮ ಸೌಲಭ್ಯ ಕಲ್ಪಿಸಿದ್ದು ಇದರಿಂದ ಸಮಯ ಹಾಗೂ ಶಕ್ತಿ ಉಳಿತಾಯವಾಗುತ್ತದೆ ಇನ್ನಷ್ಟು ಉತ್ತಮವಾಗಿ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂದ ಅವರು ಸುರಪುರಕ್ಕೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಂಜೂರುಗೊಳಿಸುವ ವಕೀಲರ ಸಂಘದ ಬೇಡಿಕೆಯನ್ನು ಈಡೇರಿಸಲು ನನ್ನ ಕೈಲಾದಷ್ಟು ಸಹಾಯ ಹಾಗೂ ಸಹಕಾರ ಮಾಡುವುದಾಗಿ ಹೇಳಿದ ಅವರು ಸುರಪುರ ನ್ಯಾಯಾಲಯದ ವಕೀಲರ ಸಂಘ ಎರಡು ಸಂಘಗಳಾಗಿದ್ದು ಇದು ಒಂದಾಗಬೇಕು ಎಂದು ಸಲಹೆ ನೀಡಿದರು.
ಹೈಕೋರ್ಟ್ ನ್ಯಾಯಮೂರ್ತಿ ಮತ್ತು ಯಾದಗಿರಿ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಪಿ.ಎನ್.ದೇಸಾಯಿ ಮಾತನಾಡಿ, ಇಂದು ಪ್ರತಿಯೊಂದು ವಿಷಯಕ್ಕೂ ಜನ ನ್ಯಾಯಾಲಯದ ಕದ ತಟ್ಟುತ್ತಿದ್ದಾರೆ ಇದರಿಂದ ನ್ಯಾಯಾಲಯದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದು ಜನರು ನ್ಯಾಯಾಲಯದ ಮೇಲೆ ಇಟ್ಟಿರುವ ವಿಶ್ವಾಸ, ನಂಬಿಕೆ ಎತ್ತಿ ತೋರಿಸುತ್ತದೆ ಎಂದರು, ಇಂದು ನ್ಯಾಯಾಂಗ ವ್ಯವಸ್ಥೆಯಲ್ಲಿ ಹೊಸ ಹೊಸ ಯೋಜನೆಗಳು ಹಾಗೂ ತಂತ್ರಜ್ಞಾನವನ್ನು ಅಳವಡಿಸಕೊಳ್ಳಲಾಗುತ್ತಿದ್ದು ತ್ವರಿತ ತೀರ್ಪು ನೀಡಲಾಗುತ್ತಿದೆ ಜನರ ಮನೆ ಬಾಗಿಲಿಗೆ ಬಂದಿದೆ ಸೌಲಭ್ಯಗಳನ್ನು ನೀಡಲಾಗುತ್ತಿದೆ ಒಳ್ಳೆಯ ಸಮಾಜ ನಿರ್ಮಾಣ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಲು ಅನುಕೂಲವಾಗಿದ್ದು ಇವುಗಳನ್ನು ಉಪಯೋಗಿಸಿಕೊಂಡು ಸಮಾಜದ ಋಣ ತೀರಿಸಲು ಉತ್ತಮವಾಗಿ ಕೆಲಸ ಮಾಡಬೇಕು ಹಾಗೂ ಸಮಾಜದ ಜನರ ನಂಬಿಕೆ ಉಳಿಸಿ ಬೆಳೆಸಿಕೊಂಡು ಹೋಗುವುದು ಎಲ್ಲರ ಜವಾಬ್ದಾರಿ ಎಂದು ಹೇಳಿದರು.
ಜಿಲ್ಲಾ ಸೆಷನ್ ನ್ಯಾಯಾಧೀಶ ಜಿ.ನಂಜುಂಡಯ್ಯ, ಹಿರಿಯ ಶ್ರೇಣಿಯ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಕಮತಗಿ, ವಕೀಲರ ಸಂಘದ ಅಧ್ಯಕ್ಷ ಎನ್.ಜೆ.ಬಾಕ್ಲಿ ವೇದಿಕೆಯಲ್ಲಿದ್ದರು. ನ್ಯಾಯಾಧೀಶರಾದ ಮಾರುತಿ.ಕೆ, ಬಸವರಾಜ, ಪಿಡಬ್ಲ್ಯೂಡಿ ಇಇ ಅಭಿಮನ್ಯು, ಎಇಇ ಎಸ್.ಜಿ.ಪಾಟೀಲ್, ಹಿರಿಯ ವಕೀಲರಾದ ಬಸವಲಿಂಗಪ್ಪ ಪಾಟೀಲ, ಜಿ.ತಮ್ಮಣ್ಣ, ನಿಂಗಣ್ಣ ಚಿಂಚೋಡಿ ಸೇರಿದಂತೆ ಸುರಪುರ, ಶಹಪುರ, ಯಾದಗಿರಿಯ ವಕೀಲರ ಸಂಘದ ಸದಸ್ಯರು ಹಾಗೂ ವಕೀಲರು ಉಪಸ್ಥಿತರಿದ್ದರು, ಎಜಿಪಿ ನಂದನಗೌಡ ಪಾಟೀಲ ನಿರೂಪಿಸಿ ವಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…