ಸಾರ್ವಜನಿಕರು ಕುಡಿಯುವ ನೀರನ್ನು ಕಾಯಿಸಿ ಕುಡಿಯಲು ಮನವಿ

0
25

ಕಲಬುರಗಿ; ನಗರಕ್ಕೆ ನೀರು ಸರಬರಾಜು ಮಾಡುವ ಜಲ ಮೂಲಗಳಾದ ಭೀಮಾ ಮತ್ತು ಬೆಣ್ಣೆತೋರಾ ನದಿಯಲ್ಲಿ ಹರಿದು ನಿಂತಿರುವ ಕುಡಿಯುವ ನೀರನ್ನು ಶುದ್ಧೀಕರಿಸಿ ಸೂಪರ್ ಕ್ಲೋರಿನೇಶನ್ ಮಾಡಿ ನೀರು ಸರಬರಾಜು ಮಾಡಲಾಗುತ್ತಿದೆಆದಾಗ್ಯೂ ನಗರದ ಸಾರ್ವಜನಿಕರು ಕುಡಿಯುವ ನೀರನ್ನು ಕಾಯಿಸಿ, ಆರಿಸಿ ಮತ್ತು ಸೊಸಿ ಕುಡಿಯಬೇಕೆಂದು ಕಲಬುರಗಿ ಕೆಯುಡಬ್ಲ್ಯೂಎಸ್ಎಂಪಿ, ಕೆಯುಐಡಿಎಫ್ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ನಗರದ ಸಾರ್ವಜನಿಕರು ತಮ್ಮ ಮನೆಗಳಿಗೆ ತೆಗೆದುಕೊಂಡು ನಳದ ಜೋಡಣೆಗೆ ತೊಟ್ಟಿಯನ್ನು ಕಡ್ಡಾಯವಾಗಿ ಕೂಡಿಸಿಕೊಳ್ಳಬೇಕು. ನಳದ ತಗ್ಗುಗಳನ್ನು ಮುಚ್ಚಬೇಕು. ಏಕೆಂದರೆ ತಗ್ಗುಗಳಲ್ಲಿ ಕಲುಷಿತ ನೀರು ಸಂಗ್ರಹಣೆಯಾಗಿ ಅದೇ ನೀರು ಮತ್ತೆ ನಳದ ತೊಟ್ಟಿಯ ಮುಖಾಂತರ ಸಾರ್ವಜನಿಕರಿಗೆ ತಲುಪುತ್ತದೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಂಭವ ಇರುತ್ತದೆ. ಇದಲ್ಲದೇ ನಗರ ಸಾರ್ವಜನಿಕರು ಕುಡಿಯುವ ನೀರನ್ನು ಪೋಲಾಗದಂತೆ ನೋಡಿಕೊಳ್ಳಬೇಕು.

Contact Your\'s Advertisement; 9902492681

ಕಲಬುರಗಿ ನಗರದ ಸಾರ್ವಜನಿಕರು ಕೆಯುಡಬ್ಲ್ಯೂಎಸ್ಎಂಪಿಕೆಯುಐಡಿಎಫ್ಸಿ ಹಾಗೂ  ಮೆ|| ಎಲ್ ಆಂಡ್ ಟಿ ಲಿಮಿಟೆಡ್ದೊಂದಿಗೆ ಸಹಕರಿಸಬೇಕೆಂದು ಕಲಬುರಗಿ ಕೆಯುಡಬ್ಲ್ಯೂಎಸ್ಎಂಪಿ, ಕೆಯುಐಡಿಎಫ್ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here