ಮುಖ್ಯಮಂತ್ರಿ ಫೈಟ್ ಶಮನ: ಸಿದ್ದು ಸಿಎಂ, ಡಿಕೆಶಿ ಡಿಸಿಎಂಆಗಿ ಪದಗ್ರಹಣ ಮೇ. 20ಕ್ಕೆ

0
118

ಬೆಂಗಳೂರು: ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಳೆದ 6 ದಿನಗಳಿಂದ ನಡೆಯುತ್ತಿರುವ ಫೈಟ್ ಸದ್ಯಕ್ಕೆ ಶಮನವಾಗಿದೆ.

ಸಿದ್ದರಾಮಯ್ಯ ಮತ್ತೊಮ್ಮೆ ಕರ್ನಾಟಕದ ಮುಖ್ಯಮಂತ್ರಿಯಾಗಲಿದ್ದಾರೆ , ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆ.ಸಿ ವೇಣು ಗೋಪಾಲ್‌ ತಿಳಿಸಿದ್ದಾರೆ.

Contact Your\'s Advertisement; 9902492681

ಮೇ 20ರಂದು ಮಧ್ಯಾಹ್ನ ನೂತನ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಜೊತೆಗೆ ಕೆಲವು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌ ಅವರೇ ಮುಂದುವರಿಯಲಿದ್ದಾರೆ ಎಂದು ತಿಳಿಸಿದರು.

ಬುಧವಾರ ತಡರಾತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಜತೆಗೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಹಲವು ಬಾರಿ ಮಾತುಕತೆ ನಡೆಸಿ, ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಂಡರು.

ಇಂದು ಬೆಳಗ್ಗೆ ವೇಣುಗೋಪಾಲ್‌ ಅವರ ನಿವಾಸದಲ್ಲಿ ಉಹಹಾರ ಮುಗಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಡಿ.ಕೆ. ಶಿವಕುಮಾರ್‌ ಪತ್ತು ಸಿದ್ದರಾಮಯ್ಯ ಒಂದೇ ಕಾರಿನಲ್ಲಿ ಆಗಮಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here