ಸುರಪುರ:ರಾಜಾ ವೆಂಕಟಪ್ಪ ನಾಯಕ ಅವರು ಒಬ್ಬ ಹಿರಿಯ ಮುತ್ಸದ್ಧಿ ರಾಜಕಾರಣಿಯಾಗಿದ್ದಾರೆ,ಅಲ್ಲದೆ ನಾಲ್ಕು ಬಾರಿ ಶಾಸಕರಾಗಿದ್ದರು ಅವರು ಎಂದೂ ಸಚಿವ ಸ್ಥಾನಕ್ಕೆ ಆಸೆ ಪಟ್ಟವರಲ್ಲ ಈಬಾರಿ ಅವರಿಗೆ ಸಚಿವ ಸ್ಥಾನ ನೀಡಲೆಬೇಕು ಎಂದು ವೀರಶೈವ ಲಿಂಗಾಯತ ಸಮುದಾಯದ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,ರಾಜಾ ವೆಂಕಟಪ್ಪ ನಾಯಕ ಅವರು ಯಾದಗಿರಿ ಕಲಬುರ್ಗಿ ಬೀದರ ಜಿಲ್ಲೆಯಲ್ಲಿನ ಏಕೈಕ ಎಸ್ಟಿ ಸಮುದಾಯದ ಶಾಸಕರಾಗಿದ್ದಾರೆ.ಅಲ್ಲದೆ ಇದು ತಮ್ಮ ಕೊನೆಯ ಚುನಾವಣೆ ಎಂದು ಈಗಾಗಲೇ ಹೇಳಿಕೊಂಡಿದ್ದಾರೆ.ಆದ್ದರಿಂದ ಈಬಾರಿ ಅವರಿಗೆ ಸಚಿವ ಸ್ಥಾನ ಕೊಟ್ಟರೆ ಅವರ ಇಷ್ಟು ವರ್ಷಗಳಕಾಲ ಪಕ್ಷನಿಷ್ಠರಾಗಿದ್ದುದಕ್ಕೆ ಪಕ್ಷ ಅವರಿಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ಮತಕ್ಷೇತ್ರದ ಎಲ್ಲಾ ವೀರಶೈವ ಲಿಂಗಾಯತ ಸಮುದಾಯದ ಕಾಂಗ್ರೆಸ್ ಮುಖಂಡರು ಮತ್ತು ಜನತೆ ಒತ್ತಾಯವನ್ನು ಮಾಡುತ್ತೇವೆ.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರೆ ಈಗ ಪಕ್ಷದ ಅಧ್ಯಕ್ಷರಾಗಿದ್ದಾರೆ,ಸಿದ್ದರಾಮಯ್ಯನವರು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ,ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರವರು ಎಲ್ಲರಿಗೂ ನಾವು ಒತ್ತಾಯಿಸುತ್ತಿದ್ದು ರಾಜಾ ವೆಂಕಟಪ್ಪ ನಾಯಕ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ನಯೋಪ್ರಾ ಮಾಜಿ ಅಧ್ಯಕ್ಷ ಸೂಗುರೇಶ ವಾರದ,ಮುಖಂಡರಾದ ಬಸವರಾಜ ಜಮದ್ರಖಾನಿ,ಶರಣು ಅರಕೇರಿ,ಶಿವರಾಜ ಕಲಕೇರಿ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ವೀರಶೈವ ಲಿಂಗಾಯತ ಸಮುದಾಯದ ಕಾಂಗ್ರೆಸ್ ಮುಖಂಡರಾದ ಮಾಜಿ ಎಪಿಎಮ್‍ಸಿ ಸದಸ್ಯ ಮಲ್ಲು ಸಾಹುಕಾರ ಮುಧೋಳ,ಶಿವು ಸಾಹುಕಾರ ರುಕ್ಮಾಪುರ,ಚಂದ್ರು ಆವಂಟಿ ಉಪಸ್ಥಿತರಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…