ಕಲಬುರಗಿ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯಕ್ಕೆ ಅನುಮೋದನೆ: ಸಂಸದ ಜಾಧವ್ ಹರ್ಷ

0
204

ಕಲಬುರಗಿ: ಇಂದು ನಾಗರಿಕ ವಿಮಾನಯಾನ ಸಚಿವಾಲಯದಡಿಯಲ್ಲಿ ಬರುವ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಅಧಿಕೃತವಾಗಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ನೈಟ್  ಲ್ಯಾಂಡಿಂಗ್ ಸೌಲಭ್ಯ ಪೂರ್ಣಗೊಂಡಿದೆ.

ಈ ಸೌಲಭ್ಯದಿಂದ ಮುಂಬರುವ ದಿನಗಳಲ್ಲಿ ಹಲವಾರು ವಿಮಾನಯಾನ ಸಂಸ್ಥೆಗಳು ದೇಶದ ವಿವಿಧ ಕಡೆ ಸೇವೆ ಆರಂಭಿಸುವ ನಿಟ್ಟಿನಲ್ಲಿ ಇದೊಂದು ಮಹತ್ವಪೂರ್ಣ ಹೆಜ್ಜೆಯಾಗಿದೆ ಎಂದು ಕಲಬುರಗಿ ಲೋಕಸಭಾ ಸದಸ್ಯ ಹರ್ಷವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ಸುಮಾರು ಎರಡು ವರ್ಷಗಳ ಹಿಂದೆಯೆ ಪೂರ್ಣಗೊಳ್ಳಬೇಕಾಗಿದ್ದ ಈ ಸೌಲಭ್ಯವು ಕೋವಿಡ್ ಹಾಗೂ ಇತರೆ ಕಾರಣಗಳಿಂದ ವಿಳಂಬವಾಗಿತ್ತು. ನಾನು ಇದರ ಬಗ್ಗೆ ಕೇಂದ್ರದ ಸಚಿವರ ಗಮನಕ್ಕೆ ಹಲವಾರು ಬಾರಿ ಲೋಕಸಭೆಯಲ್ಲಿ ಪ್ರಶ್ನೆ ಕೇಳುವ ಮೂಲಕ ಹಾಗೂ ಲಿಖಿತವಾಗಿ ಪತ್ರ ಬರೆಯುವ ಮೂಲಕ ತಂದಿದ್ದೆ ಅದರ ಪ್ರತಿಫಲವಾಗಿ ಇಂದು ನೈಟ್ ಲ್ಯಾಂಡಿಂಗ್ ಸೌಲಭ್ಯ ಪೂರ್ಣಗೊಂಡಿದೆ ಎಂದು ತನ್ನ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಶೀಘ್ರದಲ್ಲಿಯೇ ಕೇಂದ್ರ ಸಚಿವರು ಭೇಟಿ ನೀಡಿ ವಿಮಾನಯಾನ ಸಂಸ್ಥೆಗಳಿಗೆ ಕಲಬುರಗಿಯಿಂದ ಸೇವೆಯನ್ನು ಪ್ರಾರಂಭಿಸಲು ಕೋರುತ್ತೇನೆ ಎಂದು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here