ಕಲಬುರಗಿ: ಇಂದು ನಾಗರಿಕ ವಿಮಾನಯಾನ ಸಚಿವಾಲಯದಡಿಯಲ್ಲಿ ಬರುವ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಅಧಿಕೃತವಾಗಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೌಲಭ್ಯ ಪೂರ್ಣಗೊಂಡಿದೆ.
ಈ ಸೌಲಭ್ಯದಿಂದ ಮುಂಬರುವ ದಿನಗಳಲ್ಲಿ ಹಲವಾರು ವಿಮಾನಯಾನ ಸಂಸ್ಥೆಗಳು ದೇಶದ ವಿವಿಧ ಕಡೆ ಸೇವೆ ಆರಂಭಿಸುವ ನಿಟ್ಟಿನಲ್ಲಿ ಇದೊಂದು ಮಹತ್ವಪೂರ್ಣ ಹೆಜ್ಜೆಯಾಗಿದೆ ಎಂದು ಕಲಬುರಗಿ ಲೋಕಸಭಾ ಸದಸ್ಯ ಹರ್ಷವ್ಯಕ್ತಪಡಿಸಿದ್ದಾರೆ.
ಸುಮಾರು ಎರಡು ವರ್ಷಗಳ ಹಿಂದೆಯೆ ಪೂರ್ಣಗೊಳ್ಳಬೇಕಾಗಿದ್ದ ಈ ಸೌಲಭ್ಯವು ಕೋವಿಡ್ ಹಾಗೂ ಇತರೆ ಕಾರಣಗಳಿಂದ ವಿಳಂಬವಾಗಿತ್ತು. ನಾನು ಇದರ ಬಗ್ಗೆ ಕೇಂದ್ರದ ಸಚಿವರ ಗಮನಕ್ಕೆ ಹಲವಾರು ಬಾರಿ ಲೋಕಸಭೆಯಲ್ಲಿ ಪ್ರಶ್ನೆ ಕೇಳುವ ಮೂಲಕ ಹಾಗೂ ಲಿಖಿತವಾಗಿ ಪತ್ರ ಬರೆಯುವ ಮೂಲಕ ತಂದಿದ್ದೆ ಅದರ ಪ್ರತಿಫಲವಾಗಿ ಇಂದು ನೈಟ್ ಲ್ಯಾಂಡಿಂಗ್ ಸೌಲಭ್ಯ ಪೂರ್ಣಗೊಂಡಿದೆ ಎಂದು ತನ್ನ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಶೀಘ್ರದಲ್ಲಿಯೇ ಕೇಂದ್ರ ಸಚಿವರು ಭೇಟಿ ನೀಡಿ ವಿಮಾನಯಾನ ಸಂಸ್ಥೆಗಳಿಗೆ ಕಲಬುರಗಿಯಿಂದ ಸೇವೆಯನ್ನು ಪ್ರಾರಂಭಿಸಲು ಕೋರುತ್ತೇನೆ ಎಂದು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…