ಬಿಸಿ ಬಿಸಿ ಸುದ್ದಿ

ಪ್ರಿಯಾಂಕ್ ಖರ್ಗೆಗೆ ಉಪ ಮುಖ್ಯಮಂತ್ರಿ ಮಾಡಿ

ಕಲಬುರಗಿ: ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ನೂತನ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಭಾರತೀಯ ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸಮನಿ ಆಗ್ರಹಿಸಿದ್ದಾರೆ.

ಚಿತ್ತಾಪುರ ಮತ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಆಯ್ಕೆಯಾಗುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಅಲ್ಲದೆ ಕಳೆದ ಬಾರಿಯ ಕಾಂಗ್ರೆಸ್ ಸರಕಾರದಲ್ಲಿ ಸಮಾಜಕಲ್ಯಾಣ ಸಚಿವರಾಗಿ ಹಾಗೂ ಕೆಪಿಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಜನಪರ ಕಾರ್ಯಗಳಿಗೆ ಸದಾ ಸಿದ್ಧ ಇರುವ ಪ್ರಿಯಾಂಕ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಹಾಗೂ ಸಮಾಜಕಲ್ಯಾಣ, ಗೃಹ ಇಲಾಖೆಯ ಸಚಿವ ಸ್ಥಾನ ನೀಡಬೇಕು ಎಂದು ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಪಿಎಸ್‍ಐ ನೇಮಕಾತಿ ಅಕ್ರಮ ಹಗರಣ, ಬಿಟ್ ಕಾಯಿನ್ ಹಗರಣ ಸೇರಿ ನಾನಾ ಅಕ್ರಮಗಳನ್ನು ಹೊರ ತರುವ ಮೂಲಕ ಜನಪರ ಕಳಕಳಿ ಹೊಂದಿದ್ದಾರೆ. ಇಂತಹ ವ್ಯಕ್ತಿಗೆ ಉನ್ನತ ಹುದ್ದೆ ನೀಡಬೇಕು ಎಂದು ಒತ್ತಾಯಿಸಿದರು..

ಮಿಲಿಂದ್ ಎ.ಸನಗುಂದಿ, ರಮೇಶ ಚಿಮ್ಮಾಇದ್ಲಾಯಿ, ಕಲ್ಯಾಣರಾವ ಡೊಣ್ಣೂರ, ಭರತ ಬುಳ್ಳಾಘಿ, ಬಸವರಾಜ ಹಾಲಕಾಯಿ, ಪ್ರದೀಪ್ ಡೋಣುರ ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

17 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago