ಕಲ್ಯಾಣ ಕರ್ನಾಟಕಕ್ಕೆ 8 ಸಚಿವ ಸ್ಥಾನ,25 ನಿಗಮ ಮಂಡಳಿ ಸ್ಥಾನ ನೀಡಲು ಗದ್ದುಗೆ ಆಗ್ರಹ

0
19

ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಎಂಟು ಸಚಿವ ಸ್ಥಾನ ನೀಡಬೇಕು ಎಂದು ಕರವೇ ಉತ್ತರ ಕರ್ನಾಟಕ ಅದ್ಯಕ್ಷರಾದ ಶರಣು ಬಿ ಗದ್ದುಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂಡಿ ಕೆ ಶಿವಕುಮಾರ್ ಗೆ ಆಗ್ರಹಿದ್ದಾರೆ.

ಪ್ರೊ. ಡಾ. ನಂಜುಂಡಪ್ಪ ವರದಿ ಪ್ರಕಾರ 8 ಸ್ಥಾನ ನೀಡಲೇಬೇಕು,ಅನೇಕ ಪಕ್ಷಗಳು ಕಲ್ಯಾಣ ಕರ್ನಾಟಕ ಭಾಗದ ನಾಯಕರನ್ನು ಬೆಳೆಸಿಲ್ಲ. ಈ ಭಾಗದ ಅಭಿವೃದ್ಧಿಗೆ ಮುಂದಾಗಿಲ್ಲ. ಈ ಭಾಗದ ಕೆಲ ಪಕ್ಷದ ಶಾಸಕರು ಸಣ್ಣಪುಟ್ಟ ಗುತ್ತಿಗೆ ಕೆಲಸ ಪಡೆದು ತೃಪ್ತಿಪಡುತ್ತಿದ್ದಾರೆ ಅಷ್ಟೇ ಆದರೆ ಸಾಮಾಜಿಕ ನ್ಯಾಯ ಸಿಕ್ಕಿಲ್ಲ. ಕ್ಯಾಬಿನೆಟ್‍ನಲ್ಲಿ ಶಾಸಕರಿಗೆ ಸರಿಯಾದ ಸ್ಥಾನಮಾನ ನೀಡದೇ ಕೇವಲ ಕೆಲ ಜಿಲ್ಲೆಗಳಿಗೆ ಮಾತ್ರ ಸಚಿವ ಸ್ಥಾನ ನೀಡುತ್ತಿವೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಯಾವ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ ಹಿರಿಯರನ್ನು ಗುರುತಿಸಿ ಉಸ್ತುವಾರಿಯಾಗಿ ಮಾಡಿ ಹೆಚ್ಚಿನ ಆದ್ಯತೆ ನೀಡಬೇಕು,

Contact Your\'s Advertisement; 9902492681

ಕಾಂಗ್ರೆಸ ಪಕ್ಷ ಈ ಭಾಗದ ಎಂಟು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್,ಕೊಪ್ಪಳ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡಿ ನಿಗಮ ಮಂಡಳಿಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರಿಗೆ ಶೇ 25 ರಷ್ಟು ಆದ್ಯತೆ ನೀಡಬೇಕು. ಇಲ್ಲದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸಬೇಕಾಗುತ್ತದೆ ಎಂದು ಗದ್ದುಗೆ ಎಚ್ಚರಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here