ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಎಂಟು ಸಚಿವ ಸ್ಥಾನ ನೀಡಬೇಕು ಎಂದು ಕರವೇ ಉತ್ತರ ಕರ್ನಾಟಕ ಅದ್ಯಕ್ಷರಾದ ಶರಣು ಬಿ ಗದ್ದುಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂಡಿ ಕೆ ಶಿವಕುಮಾರ್ ಗೆ ಆಗ್ರಹಿದ್ದಾರೆ.
ಪ್ರೊ. ಡಾ. ನಂಜುಂಡಪ್ಪ ವರದಿ ಪ್ರಕಾರ 8 ಸ್ಥಾನ ನೀಡಲೇಬೇಕು,ಅನೇಕ ಪಕ್ಷಗಳು ಕಲ್ಯಾಣ ಕರ್ನಾಟಕ ಭಾಗದ ನಾಯಕರನ್ನು ಬೆಳೆಸಿಲ್ಲ. ಈ ಭಾಗದ ಅಭಿವೃದ್ಧಿಗೆ ಮುಂದಾಗಿಲ್ಲ. ಈ ಭಾಗದ ಕೆಲ ಪಕ್ಷದ ಶಾಸಕರು ಸಣ್ಣಪುಟ್ಟ ಗುತ್ತಿಗೆ ಕೆಲಸ ಪಡೆದು ತೃಪ್ತಿಪಡುತ್ತಿದ್ದಾರೆ ಅಷ್ಟೇ ಆದರೆ ಸಾಮಾಜಿಕ ನ್ಯಾಯ ಸಿಕ್ಕಿಲ್ಲ. ಕ್ಯಾಬಿನೆಟ್‍ನಲ್ಲಿ ಶಾಸಕರಿಗೆ ಸರಿಯಾದ ಸ್ಥಾನಮಾನ ನೀಡದೇ ಕೇವಲ ಕೆಲ ಜಿಲ್ಲೆಗಳಿಗೆ ಮಾತ್ರ ಸಚಿವ ಸ್ಥಾನ ನೀಡುತ್ತಿವೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಯಾವ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆ ಆಗಿದ್ದಾರೆ ಹಿರಿಯರನ್ನು ಗುರುತಿಸಿ ಉಸ್ತುವಾರಿಯಾಗಿ ಮಾಡಿ ಹೆಚ್ಚಿನ ಆದ್ಯತೆ ನೀಡಬೇಕು,
ಕಾಂಗ್ರೆಸ ಪಕ್ಷ ಈ ಭಾಗದ ಎಂಟು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್,ಕೊಪ್ಪಳ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡಿ ನಿಗಮ ಮಂಡಳಿಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರಿಗೆ ಶೇ 25 ರಷ್ಟು ಆದ್ಯತೆ ನೀಡಬೇಕು. ಇಲ್ಲದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸಬೇಕಾಗುತ್ತದೆ ಎಂದು ಗದ್ದುಗೆ ಎಚ್ಚರಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…