ಕಲಬುರಗಿ: ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದಿಂದ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೇಯಾಗಿರುವ ಶಿವರಾಜ್ ತಂಗಡಗಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಭೋವಿ ಸಮಾಜದ ಯುವ ಮುಖಂಡ ಸುನೀಲ ದಂಡಗುಲಕರ ಒತ್ತಾಯಿಸಿದ್ದಾರೆ.
ಭೋವಿ ಸಮಾಜವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಸಾಮಾಜಿಕವಾಗಿ ತೀರ ಹಿಂದುಳಿದ ದಲಿತ ಸಮುದಾಯವಾಗಿದ್ದು, ಅನೇಕ ಶತಮಾನಗಳಿಂದಲೂ ಶೋಷಣೆ, ಅನ್ಯಾಯ ಮತ್ತು ದೌರ್ಜನ್ಯಕ್ಕೆ ಒಳಗಾದ ಸಮುದಾಯವಾಗಿದ್ದು ಇಂತಹ ಸಮುದಾಯವನ್ನು ಮುಖ್ಯವಾಹಿನಿಗೆ ತರಬೇಕಾದರೆ ಶಿವರಾಜ್ ತಂಗಡಿಗಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡುವದು ಬಹಳ ಮುಖ್ಯವಾಗಿದೆ.
ಶಿವರಾಜ ತಂಗಡಿಗಿಯವರು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಜಿಲ್ಲೆಯ 3 ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಮುಖ್ಯ ಪಾತ್ರವಹಿಸಿಕೊಂಡಿದ್ದಾರೆ. ಈ ಹಿಂದೆ ಎರಡು ಬಾರಿ ಸಚಿವ ಸ್ಥಾನವನ್ನು ಯಾವುದೇ ಕಳಂಕ ಇಲ್ಲದೇ ಯಶಸ್ವಿಯಾಗಿ ನಿಭಾಯಿಸಿದ್ದು ಇವರ ಪಾರದರ್ಶಕ ಆಡಳಿತಕ್ಕೆ ಕೈಗನ್ನಡಿಯಾಗಿದೆ ಎಂದರು.
ಈ ವಿಷಯಗಳನ್ನು ಗಣನೆಗೆ ತೆಗೆದುಕೊಂಡು ರಾಜ್ಯದಲ್ಲಿ ಭೋವಿ ಸಮಾಜವು ಮುಖ್ಯವಾಹಿನಿಗೆ ತರಲು ಹಾಗೂ ರಾಜ್ಯದಲ್ಲಿರುವ ಭೋವಿ ಸಮಾಜದ ಸಮಗ್ರ ಅಭಿವೃದ್ದಿಗೆ ಸಹಕರಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕು ಎಂದು ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರಲ್ಲಿ, ಸಿ.ಎಲ್.ಪಿ ನಾಯಕರು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ ಇವರಲ್ಲಿ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…