ಬಿಸಿ ಬಿಸಿ ಸುದ್ದಿ

SSLC ಯಲ್ಲಿ 11ನೇ ರ್ಯಾಂಕ್: ಕಸಾಪದಿಂದ ಇಶಾನ್ ಬುಕ್ಕೇಗಾರಗೆ ಸನ್ಮಾನ

ಕಲಬುರಗಿ: ಇಂದಿನ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಾಕಾರಗೊಳ್ಳುವ ಕನಸು ಕಾಣಬೇಕು. ತನ್ಮೂಲಕ ಉನ್ನತ ಹಂತಕ್ಕೇರಿ ಸಾಧನೆ ತೋರಬೇಕು ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಸಿ.ಬಿ.ಎಸ್.ಸಿ. ಪಠ್ಯಕ್ರಮದಲ್ಲಿ ಇಡೀ ಭಾರತ ದೇಶದಲ್ಲಿ 11ನೇ ರ್ಯಾಂಕ್ ಪಡೆದು ಕಲ್ಯಾಣ ನಾಡಿಗೆ ಕೀರ್ತಿ ತಂದು ಕೊಟ್ಟ ಇಶಾನ್ ಬುಕ್ಕೇಗಾರ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಗುರುವಾರ ಏರ್ಪಡಿಸಿದ ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂಕ ಗಳಿಕೆಯೊಂದಿದ್ದರೆ ಮಾತ್ರ ಜೀವನ ಪರಿಪೂರ್ಣ ಅಲ್ಲ. ಉತ್ತಮ ವ್ಯಕಿತ್ವ್ತ ಬೇಕು. ಅಂಕದ ಜತೆಗೆ ವಿನಯವು ಬೇಕು. ನಾವು ದಿನ ನಿತ್ಯ ಕಲಿಯುತ್ತಲೇ ಇರಬೇಕು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇಂದು ವಿವಿಧ ಕ್ಷೇತ್ರದ ಸಾಧಕರಿಗೆ ಪ್ರೋತ್ಸಾಹ ನೀಡುವ ಕೆಲಸ ಆಗುತ್ತಿದ್ದು, ಇದರ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕೆಂದರು.

ಗೌರವ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಸಾಧಕ ವಿದ್ಯಾರ್ಥಿ ಇಶಾನ್ ಬುಕ್ಕೇಗಾರ, ನನ್ನ ಈ ಸಾಧನೆಗೆ ಶಿಕ್ಷಕರು, ತಂದೆ ತಾಯಿಗಳೇ ನಿಜ ಕಾರಣೀಕರ್ತರು. ಸತತವಾದ ಅಧ್ಯಯನ, ಏಕಾಗ್ರತೆಯೇ ಈ ಮಟ್ಟಕ್ಕೆ ಏರಲು ಕಾರಣವಾಯಿತು. ವಿದ್ಯಾರ್ಥಿಗಳಾದ ನಾವು ಓದಿನ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಅಂದಾಗ ಮಾತ್ರ ನಾವು ಅಂದುಕೊಂಡಿದ್ದು ಸಾಧಿಸಲಿಕ್ಕೆ ಸಾಧ್ಯವಾಗುತ್ತದೆ ಎಂದರು.

ಸಂಶೋಧಕ ಮುಡುಬಿ ಗುಂಡೇರಾವ, ಜಿಲ್ಲಾ ಕಸಾಪ ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ಪ್ರಮುಖರಾದ ಬಾಬುರಾವ ಪಾಟೀಲ,ರಾಜಶೇಖರ ಮಾಂಗ್,  ಮಾಲಾ ದಣ್ಣೂರ, ಮಾಲಿನಿ ಬುಕ್ಕೇಗಾರ, ಭುವನೇಶ್ವರಿ ಹಳ್ಳಿಖೇಡ, ಧರ್ಮಣ್ಣಾ ಹೆಚ್. ಧನ್ನಿ, ರಾಜೇಂದ್ರ ಮಾಡಬೂಳ, ಶಿವಾನಂದ ಪೂಜಾರಿ, ವಿನೋದ ಜೆನವೇರಿ, ಮಲ್ಲಿಕಾರ್ಜುನ ಕೋಟೆ, ಭೀಮಾಶಂಕರ ಪಾಟೀಲ ಕಣ್ಣಿ, ವೀರೇಶ ಪಾಟೀಲ, ವಿಶ್ವನಾಥ ತೊಟ್ನಳ್ಳಿ, ಹೆಚ್.ಎಸ್.ಬರಗಾಲಿ, ಎಸ್.ಎಂ.ಪಟ್ಟಣಕರ್, ವಿಜಯ ಪುರಾಣಿಕ್, ಸಿದ್ಧಲಿಂಗರೆಡ್ಡಿ ಹಣಮನಳ್ಳಿ, ಜಗದೀಶ ಮರಪಳ್ಳಿ, ರಾಜಶೇಖರ ಪಾಟೀಲ, ಸಾಯಬಣ್ಣಾ ಬೆಳಮ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago