ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಜಿ.ಪಂ. ಸದಸ್ಯರ ಒಂದು ತಿಂಗಳ ಗೌರವಧನ

0
39

ಕಲಬುರಗಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅತಿವೃಷ್ಟಿ ಹಾಗೂ ಭೀಕರ ಪ್ರವಾಹ ಉಂಟಾಗಿ ಹಾನಿಗೊಳಗಾದ ಪ್ರದೇಶದ ನೋಂದ ಸಂತ್ರಸ್ಥರಿಗೆ ನೆರವಾಗಲು ಕಲಬುರಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ ಹಾಗೂ ಜಿ.ಪಂ. ಎಲ್ಲ ಸದಸ್ಯರು ೨೦೧೯ರ ಆಗಸ್ಟ್ ಮಾಹೆಯ ಒಂದು ತಿಂಗಳ ಗೌರವಧನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ನಿರ್ಣಯಿಸಿದ್ದಾರೆ.

ಈ ಸಂಬಂಧ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ ಅವರು ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ ಅವರನ್ನು ಭೇಟಿ ನೀಡಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಮ್ಮ ಒಂದು ತಿಂಗಳ ಗೌರವ ಧನ ನೀಡಲು ಒಪ್ಪಿಗೆ ಪತ್ರ ಸಲ್ಲಿಸಿ ಸೂಕ್ತ ಕ್ರಮ ಜರುಗಿಸಬೇಕೆಂದು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here