ಸುರಪುರ: ಕ್ಷೇತ್ರದ ನೂತನ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ವಿಧಾನಸಭೆ ಚುನಾವಣೆಯಲ್ಲಿ ನಾಲ್ಕನೇ ಬಾರಿ ಗೆಲುವು ಸಾಧಿಸಿದ್ದಕ್ಕಾಗಿ ಹಾಗೂ ಸರಕಾರದಲ್ಲಿ ಸಚಿವ ಸ್ಥಾನ ದೊರಕಲೆಂದು ಪ್ರಾರ್ಥಿಸಿ ರಾಜಾ ವೆಂಕಟಪ್ಪ ನಾಯಕ ಅಭಿಮಾನಿಗಳು ತಿರುಪತಿ ವೆಂಕಟರಮಣನಿಗೆ ವಿಶೇಷ ಪೂಜೆ ನೆರವೇರಿಸಿದರು.
ನೂತನ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಈ ಚುನಾವಣೆಯಲ್ಲಿ ಹೆಚ್ಚಿನ ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದು ನಾಲ್ಕನೇ ಬಾರಿಗೆ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಹಿರಿಯ ರಾಜಕಾರಣಿಗಳು ಹಾಗೂ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ಧರಾಗಿ ನಡೆದುಕೊಳ್ಳುವ ನಿಷ್ಠಾವಂತ ರಾಜಕಾರಣಿಯಾಗಿದ್ದಾರೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಆದ್ಯತೆ ನೀಡಿ ಅವರಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ಯಾದಗಿರಿ ಜಿಲ್ಲೆ ಉಸ್ತುವಾರಿ ನೀಡಬೇಕು ಎಂದು ಪೂಜೆ ಸಲ್ಲಿಸಿದ ಕಾಂಗ್ರೆಸ್ ಯುವ ಮುಖಂಡ ಪ್ರಕಾಶ ಯಾದವ್ ಹೇಳಿದ್ದಾರೆ, ಆನಂದ ಗಡಗಡೆ, ವಿರೇಶ ಪಂಚಾಂಗಮಠ, ಸುನೀಲಕುಮಾರ ಮಡ್ಡಿ, ಪವನಕುಮಾರ ರಾಠಿ ಇತರರು ಉಪಸ್ಥಿತಿರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…