ಸುರಪುರ: ನಮ್ಮ ಕ್ಷೇತ್ರದ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಅವರಿಗೆ ಈಬಾರಿಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಪೇಠ ಅಮ್ಮಾಪುರ ಗ್ರಾಮದ ರಾಜಾ ವೆಂಕಟಪ್ಪ ನಾಯಕ ಅವರ ಅಭಿಮಾನಿ ಅಬ್ದುಲ್ ರಜಾಕ್ ಚಿತ್ತಾಪುರ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ರಾಜಾ ವೆಂಕಟಪ್ಪ ನಾಯಕ ಅವರು ಹಿರಿಯ ಶಾಸಕರಾಗಿದ್ದಾರೆ.ಅಲ್ಲದೆ ನಾಲ್ಕು ಬಾರಿ ಶಾಸಕರಾಗಿದ್ದು ಇದು ಅವರು ತಮ್ಮ ಕೊನೆಯ ಚುನಾವಣೆ ಎಂದು ಘೋಷಿಸಿಕೊಂಡಿದ್ದಾರೆ.ಇಂತಹ ಸಂದರ್ಭದಲ್ಲಿ ಅವರಿಗೆ ಕಾಂಗ್ರೆಸ್ ಪಕ್ಷ ಸಚಿವ ಸ್ಥಾನ ನೀಡಲೇಬೇಕು ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರಲ್ಲಿ,ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಲ್ಲಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ ಸೇರಿದಂತೆ ಎಲ್ಲಾ ಮುಖಂಡರಲ್ಲಿ ವಿನಂತಿಸುವುದಾಗಿ ತಿಳಿಸಿದ್ದಾರೆ.
ಅದೇರೀತಿಯಾಗಿ ಮುಖಂಡರುಗಳಾದ ಶೇಖ ಅಲಿ,ಅಲ್ಲಾಭಕ್ಷ ಸಾಲವಾಡಗಿ,ಇಮಾಮಸಾಬ್ ಗುಡಗುಂಟಿ,ಅಬ್ದುಲ್ ಸುರಪುರ,ಸದ್ದಾಂ ಸಾಲವಾಡಗಿ,ಅಸ್ಲಂ ಹವಲ್ದಾರ್,ಅಲ್ಲಾಭಕ್ಷ ಷೇಕ್ಸಿಂದಿ ಕಾಂಗ್ರಸ್ ಯುವ ಮುಖಂಡರು ಬೋನಾಳ ಇವರುಗಳು ರಾಜಾ ವೆಂಕಟಪ್ಪ ನಾಯಕರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.