ಕಲಬುರಗಿ; ಬಿಜೆಪಿಗೆ ಸೋಲು ಮತ್ತು ಗೆಲುವು ಹೊಸದಲ್ಲ, ಈ ಬಾರಿಯ ವಿಧಾನ ಸಭೆ ಚುನಾವಣೆಯ ಫಲಿತಾಂಶದಿಂದ ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ ಎಂದು ಬಸವಕಲ್ಯಾಣ ಮತಕ್ಷೇತ್ರದಿಂದ ಸತತವಾಗಿ 2ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಶರಣು ಸಲಗರ ಹೇಳಿದರು.
ಅವರು, ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ ಅಂಬಾರಾಯ ಅಷ್ಠಗಿ ಅವರ ಕಲಬುರಗಿಯ ಮನೆಗೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
ಪಕ್ಷದ ಹಿನ್ನಡೆಯ ಬಗ್ಗೆ ಪಕ್ಷದ ಪ್ರಮುಖರು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಶಾಸಕ ಶರಣು ಸಲಗರ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ.ಅಂಬಾರಾಯ ಅಷ್ಠಗಿ ಮಾತನಾಡಿ, ಎಲ್ಲ ಜಾತಿ- ಧರ್ಮದ ಜನರ ಬೆಂಬಲದೊಂದಿಗೆ ಪಕ್ಷವನ್ನು ಪುನಃ ಸಂಘಟಿಸುವ ಮೂಲಕ ಮತ್ತೆ ಪಕ್ಷವನ್ನು ಗತ ವೈಭವದ ಎಡೆಗೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನ ಮಾಡೋಣ ಎಂದು ಹೇಳಿದರು.
ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಪಕ್ಷ ಪುಟಿದೇಳುವ ಭರವಸೆಯನ್ನು ಡಾ ಅಂಬಾರಾಯ ಅಷ್ಠಗಿ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಎಪಿಎಂಸಿ ಉಪಾಧ್ಯಕ್ಷ ರಾಜಕುಮಾರ್ ಕೋಟೆ, ಗುಲ್ಬರ್ಗಾ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ರಾಜಕುಮಾರ್ ಕಗ್ಗನಮಡಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಟಗಿ, ಬಿಜೆಪಿ ಯುವ ಮುಖಂಡರುಗಳಾದ ಪ್ರೊ. ಯಶವಂತರಾಯ ಅಷ್ಠಗಿ, ವೀರೇಶ ಪಾಟೀಲ್ ದಿನಸಿ, ಡಾ ಗುಂಡಪ್ಪ ಸಿಂಗೆ, ಸುನೀಲ್ ಕೋಟ್ರೆ, ನಾಗರಾಜ್ ಸಿರಸಗಿ, ಸೇರಿದಂತೆ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…