ಬಿಸಿ ಬಿಸಿ ಸುದ್ದಿ

ಸಿದ್ದು ಸಿಎಂ- ಡಿಕೆಶಿ ಡಿಸಿಎಂ ಆಗಿ ಪ್ರಮಾಣ ವಚನ: ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ

ಶಹಾಬಾದ: ನಗರದ ನೆಹರು ವೃತ್ತದಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿ ಬಳಗದವರು ಸಿದ್ದರಾಮಯ್ಯನವರು ಸಿಎಂ ಆಗಿ ಮತ್ತು ಡಿಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ ಮಾತನಾಡಿ,ಸಿದ್ದರಾಮಯ್ಯನವರು ಎರಡನೇ ಅವಧಿಗೆ ಸಿಎಂ ಆಗಿ ಮತ್ತು ಡಿಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದಲ್ಲದೇ ಉತ್ತಮ ಆಡಳಿತ ನೀಡುವ ಭರವಸೆಯೊಂದಿಗೆ ಕೈ ಅಧಿಕಾರಕ್ಕೆ ಬಂದಿರುವುದು ಹೆಮ್ಮೆ ತಂದಿದೆ. ಎಂದರು. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಪಕ್ಷಕ್ಕೆ ಎರಡು ಕಣ್ಣು ಇದ್ದಹಾಗೆ ಇಬ್ಬರೂ ಸೇರಿ ಕೊಟ್ಟ ಭರವಸೆಗಳನ್ನು ಈಡೇರಿಸಲಿದ್ದಾರೆ. ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಪಕ್ಷ ಜಯಭೇರಿ ಭಾರಿಸುವ ಮೂಲಕ ದೇಶದಲ್ಲಿ ಹೊಸ ಮನ್ವಂತರ ಸೃಷ್ಟಿಸಲಿದೆ. ವಿಶೇಷವಾಗಿ ಮಹಿಳಾ ಸಂಘಟನೆ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಹೇಳಿದ ಅವರು ಇಬ್ಬರೂ ನಾಯಕರಿಗೆ ಶುಭ ಹಾರೈಸಿದರು.

ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರ ಪೀರಪಾಶಾ ಮಾತನಾಡಿ, ಸಿದ್ದರಾಮಯ್ಯನವರು ಈಗಾಗಲೇ ಸಿಎಂ ಆಗಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ.ಅವರಿಗೆ ಒಳ್ಳೆಯ ಅನುಭವ ಇದೆ. ರಾಜ್ಯದ ಜನತೆಗೆ ನೀಡಿದ 5 ಗ್ಯಾರಂಟಿಗಳನ್ನು ಮಾಡುವ ಮೂಲಕ ನುಡಿದಂತೆ ನಡೆಯುವ ಸರಕಾರ ಎಂದರೆ ಕಾಂಗ್ರೆಸ್ ಸರಕಾರ ಎಂದು ಮನಗಾಣಬೇಕೆಂದರು.ಆದರೆ ಬಿಜೆಪಿಯ ಮುಖಂಡರು ಮಾಡುವ ಮೊದಲೇ ಆಗುವುದಿಲ್ಲ.ಸುಳ್ಳು ಹೇಳುತ್ತಿದ್ದಾರೆ ಎಂದು ಇಲ್ಲಸಲ್ಲದ ಮಾತುಗಳನ್ನು ಅಪಪ್ರಚಾರ ಮಾಡುತ್ತಿದ್ದಾರೆ.ಬಿಜೆಪಿಯವರದು ಕೇವಲ ಕೆಡಿಸುವ ಮಾತು.ಆದರೆ ಕಾಂಗ್ರೆಸನವರ ಕೆಲಸ ಮಾಡಿ ತೋರಿಸುವ ಮಾತುಗಳಾಗಿವೆ.ಈಗಾಗಲೇ ಸಿದ್ದರಾಮಯ್ಯನವರು ಹಾಗೂ ಡಿಕೆ ಶಿವಕುಮಾರ್ ಅವರು 5 ಗ್ಯಾರಂಟಿಗಳನ್ನು ಮಾಡೇ ಮಾಡುತ್ತೆವೆ ಎಂದು ಹೇಳಿದ್ದಾರೆ ಎಂದು ಹೇಳಿದರು.

ಮುಖಂಡರಾದ ಶರಣಗೌಡ ಪಾಟೀಲ ಗೋಳಾ(ಕೆ), ಕುರುಬ ಸಮಾಜದ ತಾಲೂಕಾಧ್ಯಕ್ಷ ಮಲ್ಕಣ್ಣ ಮುದ್ದಾ,ಅನೀಲಕುಮಾರ ಅಲ್ಲಂಶೆಟ್ಟಿ, ಮರಲಿಂಗ ಕಮರಡಗಿ,ಸಾಹೇಬಗೌಡ ಬೋಗುಂಡಿ, ಡಾ.ಅಹ್ಮದ್ ಪಟೇಲ್, ಕಾಂಗ್ರೆಸ್ ಯುವ ಅಧ್ಯಕ್ಷ ಕಿರಣ ಚವ್ಹಾಣ,ನಿಂಗಣ್ಣ ಪೂಜಾರಿ, ಪೂಜಪ್ಪ ಮೇತ್ರೆ, ಮಹ್ಮದ್ ಅಜರುದ್ದಿನ್ ಬಾಕರ್,ಸಾಯಿಬಣ್ಣ ಕೊಲ್ಲೂರ್, ಮಲ್ಲಿಕಾರ್ಜುನ ಧರಿ,ವಿಜಯಕುಮಾರ ಕಂಠಿಕರ್ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago