ಸುರಪುರ: ರಂಗಂಪೇಟಿಯ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಖ್ಯಾತ ಉದ್ಯಮಿ ಭೀಮಣ್ಣ ರುದ್ರಪ್ಪ ಆವಂಟಿ(75) ಅವರು ಭಾನುವಾರ ನಿಧನ ಹೊಂದಿದರು.
ಮೃತರಿಗೆ ಪತ್ನಿ, ಇಬ್ಬರು ಪುತ್ರರು,ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಸೋಮವಾರ ಬೆಳಗ್ಗೆ 11ಗಂಟೆಗೆ ರಂಗಂಪೇಟಿಯ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಜರುಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.