ಕಲಬುರಗಿ: ನಗರದ ಡಿ ಎ ಆರ್ ಹೆಡ್ ಕ್ವಾರ್ಟರ್ಸ್ ನಲ್ಲಿ ನೇಣು ಬಿಗಿದುಕೊಂಡು ಹೆಡ್ ಕಾನ್ಸಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಚಿಮ್ಮನಚೋಡ್ ಗ್ರಾಮದ ನಿವಾಸಿ 47) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಸಿಬ್ಬಂದಿ.
ನಿನ್ನೆ ರಾತ್ರಿ 10 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳಿದ್ದ ಪಾಂಡುರಂಗ, ಶಕೆ ಇದೆ ಅಂತಾ ಇಬ್ಬರು ಮಕ್ಕಳು ಮನೆಯ ಮೇಲ್ಚಾವಣಿಯಲ್ಲಿ ಮಲಗಿದ್ದರು. ಗಂಡ ಹೆಂಡತಿ ಇಬ್ಬರು ಕ್ವಾಟರ್ಸ್ ನ ಬೆಡ್ ರೂಮ್ ನಲ್ಲಿ ಮಲಗಿದ್ದರು. ನಸುಕಿನ ಜಾವ ಮನೆಯ ಅಡುಗೆ ಕೊಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾನೆ ಎನ್ನಲಾಗಿದೆ
ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.