ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿನೀಡಿ ಬೆಂಗಳೂರಿನ ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ 23 ವರ್ಷದ ಭಾನುರೇಖಾ ಅವರ ಕುಟುಂಬದವರನ್ನು ಭೇಟಿಮಾಡಿ ಸಾಂತ್ವನ ಹೇಳಿದರು.
ಇದೇ ವೇಳೆ ದುರ್ಘಟನೆಯಲ್ಲಿ ಸಾವನ್ನಪ್ಪಿದ ಯುವತಿಯ ಕುಟುಂಬಕ್ಕೆ ರೂ. 5 ಲಕ್ಷ ಪರಿಹಾರ ಹಾಗೂ ಅಸ್ವಸ್ಥಗೊಂಡಿರುವ ಎಲ್ಲರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದರು.
ಅಂಡರ್ ಪಾಸ್ ಗಳಿಂದ ನೀರು ಹೊರಹೋಗುವ ಚರಂಡಿಗಳು ಹೂಳು ತುಂಬಿರುವುದರಿಂದ ಏಕಾಏಕಿ ಮಳೆ ಸುರಿದಾಗ ನೀರು ಸಂಗ್ರಹಗೊಂಡು ಇಂಥ ಅವಘಡಕ್ಕೆ ಕಾರಣವಾಗುತ್ತಿದೆ. ನಗರದಲ್ಲಿ ಮಳೆ ನೀರು ಸಂಗ್ರಹಗೊಳ್ಳುವ ಎಲ್ಲಾ ಅಂಡರ್ ಪಾಸ್ ಗಳನ್ನು ಗುರುತಿಸಿ ಸರಿಪಡಿಸಲಾಗುವುದು ಹಾಗೂ ಕಾಲುವೆ ಒತ್ತುವರಿಯನ್ನು ತೆರವು ಮಾಡಿ ನೀರಿನ ಸರಾಗ ಹರಿವಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…