ಸುರಪುರ:ರಾಜಾ ವೆಂಕಟಪ್ಪ ನಾಯಕ ಅವರು ಈಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ಅಂಜನಾದ್ರಿ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದರು.
ತಾಲೂಕಿನ ಪೇಠ ಅಮ್ಮಾಪುರ ಗ್ರಾಮ ದಿಂದ ಸೋಮವಾರ ಆರಂಭಗೊಂಡ ಪಾದಯಾತ್ರೆಗೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ವಿಠ್ಠಲ್ ಯಾದವ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪಾದಯಾತ್ರೆ ಹೊರಟಿರುವ ಕಾಂಗ್ರೆಸ್ ಯುವ ಮುಖಂಡ ಮಹೇಶ ವಿ ಯಾದವ್ ಮಾತನಾಡಿ,ಚುನಾವಣೆಗೆ ನಾಮಪತ್ರ ಸಲ್ಲಿಕೆ ದಿನದಂದು ನಮ್ಮೂರಿನ ಹನುಮಾನ ದೇವಸ್ಥಾನದಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಈಬಾರಿ ಜಯಗಳಿಸಲಿ ಪೇಠ ಅಮ್ಮಾಪುರ ಹನುಮಾನ ದೇವಸ್ಥಾನ ದಿಂದ ಅಂಜನಾದ್ರಿ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ತೆರಳುವುದಾಗಿ ಪ್ರಾರ್ಥಿಸಿದ್ದೆ.ಅದರಂತೆ ಈಗ ರಾಜಾ ವೆಂಕಟಪ್ಪ ನಾಯಕ ಅವರು ಜನಗಳಿಸಿದ್ದು ಅದಕ್ಕಾಗಿ ಅಂಜನಾದ್ರಿ ಬೆಟ್ಟಕ್ಕೆ ಪಾದಯಾತ್ರೆ ಆರಂಭಿಸಲಾಗಿದೆ.ದಿನಕ್ಕೆ 30 ಕಿಲೋ ಮೀಟರ್‍ಗಳಂತೆ 5 ದಿನಗಳ ಕಾಲ ಪಾದಯಾತ್ರೆ ನಡೆಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಹಣುಮಗೌಡ ಪೊಲೀಸ್ ಪಾಟೀಲ್,ಚಂದಪ್ಪ ಯಾದವ್,ನದೀಮ್ ಇನಾಂದಾರ,ದೇವಸ್ಥಾನ ಅರ್ಚಕ ಹಣಮಂತ ಪೂಜಾರಿ,ಪ್ರಕಾಶ ಯಾದವ್,ಸಣ್ಣಿ ಯಾದವ್,ಮಲ್ಲಿಕಾರ್ಜುನ ರೆಡ್ಡಿ ಕೋಳಿಹಾಳ,ವಿರೇಶ ಪಂಚಾಂಗಮಠ, ಹಣಮಂತ ರಾವೂರ್ ಸೇರಿದಂತೆ ರಾಜಾ ವೆಂಕಟಪ್ಪ ನಾಯಕ ಹಾಗೂ ವಿಠ್ಠಲ್ ಯಾದವ್ ಅವರ ನೂರಾರು ಅಭಿಮಾನಿಗಳು ಭಾಗವಹಿಸಿ ಪಾದಯಾತ್ರೆಯಲ್ಲಿ ಭಾಗವಹಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…