ಸಚಿವ ಜಮೀರ್ ಅಹ್ಮದ್ ವಿರುದ್ಧ ಕರವೇ ಅಧ್ಯಕ್ಷ ಆಕ್ರೋಶ

0
13

ಸುರಪುರ: ಕರ್ನಾಟಕ ಸರಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ) ತಾಲೂಕು ಅಧ್ಯಕ್ಷ ನಿಂಗಪ್ಪ ನಾಯಕ ಬಿಜಾಸಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು,ಕರ್ನಾಟಕದಲ್ಲಿ ಜನಿಸಿ,ಇಲ್ಲಿಯ ಅನ್ನವನ್ನು ಸೇವಿಸುವ,ಇಲ್ಲಿ ರಾಜಕೀಯ ಮಾಡುವ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಮಾಣ ವಚನ ಸ್ವೀಕಾರ ಇಂಗ್ಲೀಷ್ ಭಾಷೆಯಲ್ಲಿ ಸ್ವೀಕರಿಸಿ ಕನ್ನಡದ್ರೋಹ ಎಸಗಿದ್ದಾರೆ. ಅಲ್ಲದೆ ಸ್ವಾಭಿಮಾನಿ ಕನ್ನಡಿಗರ ಭಾವನೆಗೆ ಧಕ್ಕೆ ಮಾಡಿದ್ದಾರೆ.

Contact Your\'s Advertisement; 9902492681

ಕೂಡಲೇ ಜಮೀರ್ ಅಹ್ಮದ್ ಖಾನ್ ಕನ್ನಡಿಗರ ಕ್ಷಮೆಯಾಚಿಸಬೇಕು ಮತ್ತು ಮುಂದೆ ಕನ್ನಡವನ್ನು ಕಲಿತುಕೊಳ್ಳಬೇಕು ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅವರಿಗೆ ಸರಿಯಾದ ಪಾಠವನ್ನು ಕಲಿಸಲಿದೆ ಎಂದು ಎಚ್ಚರಿಕೆ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here