ಆಳಂದ: ವಿಧಾನಸಭೆ ಚುನಾವಣೆ ಬಳಿಕ ಮೊದಲು ಬಾರಿಗೆ ಪಟ್ಟಣಕ್ಕೆ ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆರವರಿಗೆ ಮತ್ತು ನೂತನ ಶಾಸಕ ಬಿ.ಆರ್. ಪಾಟೀಲ ಅವÀರಿಗೆ ಭಾನುವಾರ ಕಾಂಗ್ರೆಸ್ಸಿಗರು ಅದ್ಧೂರಿಯಾಗಿ ಸ್ವಾಗತ ನೀಡಿದರು.
ಪಟ್ಟಣದ ಬಸ್ ನಿಲ್ದಾಣ ಮುಂದೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆರವರು ಕುಳಿತ್ತಿದ್ದ ವಾಹನ ಆಗಮಿಸುತ್ತಿದ್ದಂತೆ ಶಾಸಕ ಬಿ.ಆರ್. ಪಾಟೀಲ ಅವರು ಹೂಗುಚ್ಚು ನೀಡಿ ಸ್ವಾಗತಿಸಿದರು. ಕಾರ್ಯಕರ್ತರು, ಮುಖಂಡರು ಅಭಿಮಾನಿಗಳು ಸೇರಿ ಮಲ್ಲಿಕಾರ್ಜುನ ಖರ್ಗೆ ಮತ್ತು ಬಿ.ಆರ್. ಪಾಟೀಲ ಪರ ಜಯಘೋಷ ಹಾಕಿದರು ಅಲ್ಲದೆ, ಇದೇ ವೇಳೆ ಹೂ ಮಳೆಗೇರೆದರು. ಜೆಸಿಬಿ ಮೂಲಕ ವಾಹನಕ್ಕೆ ಹೂ ಸುರಿದರು ಮತ್ತು ಕಿವಿಗಡಚ್ಚಿಕುವಂತೆ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸ್ವಾಗತ ಸ್ವೀಕರಿಸಿದ ಖರ್ಗೆ ಅವರು ಮಹಾರಾಷ್ಟ್ರಕ್ಕೆ ತೆರಳಿದರು. ಬಿ.ಆರ್. ಪಾಟೀಲರಿಗೆ ಅಭಿಮಾನಿಗಳು ಪ್ರತ್ಯೇಕವಾಗಿ ಸನ್ಮಾನಿಸಿ ಸ್ವಾಗತಿಸಿದರು.
ಕೃಷಿಕ ಸಮಾಜ ತಾಲೂಕು ಅಧ್ಯಕ್ಷ ಗುರುಶರಣ ಪಾಟೀಲ ಕೊರಳ್ಳಿ, ರೇವಣಸಿದ್ಧಪ್ಪ ನಾಗೂರೆ, ಚನ್ನು ಕಾಳಕಿಂಗೆ ಜಿಡಗಾ, ಮಲ್ಲಪ್ಪ ಹತ್ತರಕಿ, ರಮೇಶ ಲೋಹಾರ, ಜಿಪಂ ಮಾಜಿ ಸದಸ್ಯ ಸಿದ್ಧರಾಮ ಪ್ಯಾಟಿ, ಮಲ್ಲಿನಾಥ ಪಾಟೀಲ ಮದಗುಣಕಿ, ಮಜರ ಹುಸೇನ, ಸುಲೆಮಾನ ಮುಕಟ್, ಸಲಾಂ ಸಗರಿ, ಪಾಶಾ ಗುತ್ತೇದಾರ, ದಿಲೀಪ ಕ್ಷೀರಸಾಗರ, ಕಾಂಗ್ರೆಸ್ ಅಧ್ಯಕ್ಷ ಶರಣಗೌಡ ಪಾಟೀ, ಎಐಸಿಸಿ ಸದಸ್ಯ ರಾಜಶೇಖರ ಚಿತಲಿ, ಮೋಹನಗೌಡ ಪಾಟೀಲ, ಸೀತಾರಾಮ ರಾಠೋಡ, ಬಾಬುರಾವ್ ಅರುಣದೋಯ, ಸೇರಿದಂತೆ ಸಾವಿರು ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಮುಖಂಡರು ಪಾಲ್ಗೊಂಡಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…