ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಿಗ್ಗಾಂವ ಗ್ರಾಮದಲ್ಲಿ ಭಾರಿ ಮಳೆಯ ಮಧ್ಯೆ ಸಿಡಿಲು ಬಡಿದು ಯುವಕನೋರ್ವ ಸಾವನ್ನಪ್ಪಿ ಆರು ಜನರಿಗೆ ಗಾಯಗಳಾದ ಘಟನೆ ಸಂಭವಿಸಿದೆ.
ದಿಗ್ಗಾಂವ್ ಗ್ರಾಮದ ಭೀಮು ಪೂಜಾರಿ (18) ಸಿಡಿಲಿಗೆ ಬಲಿಯಾದ ಯುವಕ ಎಂದು ಗುರುತಿಸಲಾಗಿದೆ. ಇದೇ ವೇಳೆಯಲ್ಲಿ ಕೋಡ್ಲಾ ಮತ್ತು ದಿಗ್ಗಾಂವ್ ಗ್ರಾಮದ ಮಧ್ಯೆ ಸಿಡಿಲು ಬಡಿದು ಆರು ಜನ ಗಂಭೀರ ಗಾಯಗೊಂಡಿರುವ ಘಟನೆಯೂ ನಡೆದಿದೆ.
ಗಾಯಗಳನ್ನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು, ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಹವಾಮಾನ ಇಲಾಖೆ ಎಚ್ಚರಿಕೆ: ರಾಜ್ಯದ ಕಲಬುಗಿಯೂ ಸೇರಿದಂತೆ ಹಲವುಜಿಲ್ಲೆಯಲ್ಲಿ ಸಂಜೆ ಆಥವಾ ತಡ ರಾತ್ರಿ ಭಾರಿ ಮಳೆ, ಬಿರುಗಾಳಿ ಮತ್ತು ಸಿಡಿಲು ಬೀಳುವ ಸಾಧ್ಯತೆ ಇದ್ದು, ಜನರು ಜಾನುವಾರು ಹಾಗೂ ತಮ್ಮ ಜೀವಗಳ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…