RSS ಬ್ಯಾನ್ ವಿಚಾರ ಬಿಜೆಪಿಗೆ ಮಾರುತ್ತರ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

0
12

ಕಲಬುರಗಿ: ಪದೇ ಪದೇ ಆರ್ ಎಸ್ ಎಸ್ ಬ್ಯಾನ್ ಮಾಡಿ ಎಂದು ಸವಾಲು ಹಾಕುತ್ತಿರುವ ಬಿಜೆಪಿಗರಿಗೆ ಸಚಿವ ಪ್ರಿಯಾಂಕ್ ಖರ್ಗೆ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿ ನೋಡಿ ಆಗ ಬಾಬಾಸಾಹೇಬರ ಸಂವಿಧಾನದ ಶಕ್ತಿಯನ್ನು ತೋರಿಸುತ್ತೇವೆ ಎಂದು ಟ್ವಿಟ್ ಮಾಡುವ ಮೂಲಕ ಮಾರುತ್ತರ ನೀಡಿದ್ದಾರೆ.

ಬಿಜೆಪಿಗರು ಪದೇ ಪದೆ ಆರ್ ಎಸ್ ಎಸ್ ಬ್ಯಾನ್ ಮಾಡಿ ನೋಡಿ ಅಂತಿದ್ದಾರೆ. ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲ.

Contact Your\'s Advertisement; 9902492681

ಈಗ ಒಂದೇ ಒಂದು ಬಾರಿ ಸಮಾಜದಲ್ಲಿ ಶಾಂತಿ ಕದಡುವ, ಹೆಣದ ಮೇಲೆ ರಾಜಕೀಯ ಬೇಳೆ ಬೇಯಿಸುವ, ಅಂಸವಿಧಾನಿಕ ಚಟುವಟಿಕೆ ಮಾಡುವ ಪ್ರಯತ್ನ ಮಾಡಿ ನೋಡಿ. ಆಗ ಬಾಬಾಸಾಹೇಬ ಅಂಬೇಡ್ಕರ್ ಅವರ ಸಂವಿಧಾನದ ಪವರ್ ನಾವು ತೋರಿಸುತ್ತೇವೆ ಎಂದು‌ ಮಾರುತ್ತರ ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here