ಬಿಸಿ ಬಿಸಿ ಸುದ್ದಿ

ಬಿಜೆಪಿ ಆಯ್ತು ಈಗ ಕಾಂಗ್ರೆಸ್ ನಿಂದ ಧಮ್ಕಿ ರಾಜಕಾರಣ: ಅಪ್ಪಾಜಿ ಆಕ್ರೋಶ

ಸೇಡಂ: ಇಷ್ಟು ದಿನ ಬಿಜೆಪಿ ಪಕ್ಷದವರು ಕೋಮುದ್ವೇಷ ಹರಡಿದ್ದಾಯ್ತು. ಈಗ ಕಾಂಗ್ರೆಸ್ ಸಹ ಅದೇ ಕೆಲಸ ಶುರುವಿಟ್ಟುಕೊಳ್ಳುವ ಮೂಲಕ ಧಮ್ಕಿ ರಾಜಕಾರಣ ಮಾಡುತ್ತಿದೆ ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಶಿವಕುಮಾರ ಅಪ್ಪಾಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಜಾಬ್, ಹಲಾಲ್, ಝಟ್ಕಾ ಹೀಗೆ ಭಾವೈಕ್ಯದ ದೇಶದಲ್ಲಿ ಕೋಮುದ್ವೇಷ ಹರಡಿದ ಬಿಜೆಪಿ ಈಗ ಮೂಲೆಗುಂಪಾಗಿದೆ. ಕಾಂಗ್ರೆಸ್ ಸಹ ಅದೇ ಚಾಳಿ ಮುಂದುವರೆಸಿದ್ದು, ಈ ಎರಡೂ ಪಕ್ಷಗಳಿಗೆ ಜನರ ಏಳ್ಗೆ, ಅಭಿವೃದ್ದಿಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂಬುದು ಮೇಲುನೋಟಕ್ಕೆ ಕಂಡುಬರುತ್ತಿದೆ ಎಂದು ಕಿಡಿಕಾರಿದ್ದಾರೆ.

ಭರವಸೆ ಕೊಟ್ಟಂತೆ ಗ್ಯಾರಂಟಿ ಯೋಜನೆಗಳನ್ನು ಯಥಾವತ್ತಾಗಿ ಜಾರಿ ಮಾಡದೆ. ಭಜರಂಗದಳ, ಆರ್.ಎಸ್.ಎಸ್. ಬ್ಯಾನ್ ಮಾಡುವ ಮಾತುಗಳನ್ನಾಡುತ್ತಿರುವ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಮತಿಭ್ರಮಣೆಯಾದಂತಿದೆ. ಮೊದಲು ಕಾಂಗ್ರೆಸ್ ಪಕ್ಷ ಜನರಿಗೆ ನೀಡಿದ ಭರವಸೆಗಳನ್ನು ಕರಾರಿಲ್ಲದೆ ಜಾರಿ ಮಾಡಬೇಕು. ಭಾರತವನ್ನು ಕೇವಲ ಕೋಮುದ್ಚೇಷಕ್ಕಾಗಿ ಬಳಸಿಕೊಳ್ಳದೆ 0% (ಪರ್ಸಂಟೇಜ್ ಪಡೆಯದೆ)ಕಾಮಗಾರಿಗಳನ್ನು ಮಾಡುವ ಮೂಲಕ ಸದ್ಬಳಕೆ ಮಾಡಿಕೊಳ್ಳಿ ಎಂದು ಕಿವಿಮಾತು ಹೇಳಿದ್ದಾರೆ.

ಈಗಾಗಲೇ ನಿರುದ್ಯೋಗಿಗಳ ಕೆಂಗಣ್ಣಿಗೆ ಕಾಂಗ್ರೆಸ್ ಸರಕಾರ ಗುರಿಯಾಗಿದೆ. ಸರ್ಕಾರಕ್ಕೆ ಬಡವರ ಮೇಲೆ ಪ್ರಾಮಾಣಿಕ ಕಾಳಜಿ ಇದ್ದದ್ದೇ ಆದಲ್ಲಿ ಷರತ್ತುಗಳಿಲ್ಲದ ಗ್ಯಾರಂಟಿ ಭಾಗ್ಯಗಳನ್ನ ಕರುಣಿಸಲಿ ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಪ್ರತಿಯೊಂದು ಗ್ರಾಮ, ಬಯಲು ಶೌಚಮುಕ್ತವಾಗಲಿ. ಮಹಿಳೆಯರಿಗೆ ಗೌರವ ದೊರೆಯುವಂತಾಗಲಿ. ಗಾಡಿ ಬಂದಾಗ ಎದ್ದು ನಿಲ್ಲುವ ಮಹಿಳೆಯರ ಮನದಾಳದ ಅಳಲಿಗೆ ಶಾಶ್ವತ ಪರಿಹಾರ ದೊರಕಿಸಿಕೊಡಿ ಎಂದು ಅವರು ಆಗ್ರಹ ಮಾಡಿದ್ದಾರೆ.

20 ವರ್ಷ ಕಳೆದರೂ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿಲ್ಲ. ಸೇಡಂ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಆಡಳಿತ ನಡೆಸಿದೆ. ಅವರ ಅವಧಿಯಲ್ಲೇ ಹೆಚ್ಚಿನ ಸಿಮೆಂಟ್ ಕಾರ್ಖಾನೆಗಳು ಹಾಗೂ ಸೋಲಾರ್ ಕಂಪನಿಗಳು ತಲೆ ಎತ್ತಿವೆ. ಆದರೂ ಸಹ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿಲ್ಲ. ಬಡವರು ಬಡವರಾಗಿಯೇ ಬದುಕುವ ದುಸ್ಥಿತಿ ನಿರ್ಮಾಣವಾಗಿದೆ. ಶಾಸಕ ಡಾ. ಶರಣಪ್ರಕಾಶ ಪಾಟೀಲ ಅವರು ಈಗಲಾದರೂ ಯುವಕ ಯುವತಿಯರ ಬದುಕು ರೂಪಿಸುವ ಕೆಲಸ ಮಾಡಬೇಕು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

2 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

2 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

2 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

19 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

21 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago