ಬಿಸಿ ಬಿಸಿ ಸುದ್ದಿ

ಕೆಬಿಎನ್ ವಿವಿಯಲ್ಲಿ ನ್ಯಾಕ ಕಾರ್ಯಾಗಾರ

ಕಲಬುರಗಿ : ರಾಜ್ಯದ ವಿಶ್ವವಿದ್ಯಾಲಯಗಳು ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಸಾಧನೆ ಮತ್ತು ಬೋಧನೆ, ಸಂಶೋಧನೆಗಳಲ್ಲಿ ಉನ್ನತ್ತೀಕರಣ ಹೊಂದಿ ಗುರಿ ಸಾಧಿಸಲು ನ್ಯಾಕ್ ಮೌಲ್ಯಮಾಪನ ಮತ್ತು ಮಾನ್ಯತೆ ಅತಿ ಅವಶ್ಯಕವಾಗಿದೆ ಎಂದು ಕುವೆಂಪು ವಿಶ್ವ ವಿದ್ಯಾಲಯದ ಅನ್ವಯಿಕ ಭೂವಿಜ್ಞಾನ ವಿಭಾಗದ ಪ್ರಾದ್ಯಾಪಕ ಪ್ರೊ. ಆಶಫಕ್ ಅಹ್ಮದ್ ಅಭಿಪ್ರಾಯಪಟ್ಟರು. ಖಾಜಾ ಬಂದೇನವಾಜ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ “ನ್ಯಾಕ್ ಮೌಲ್ಯಮಾಪನ ಮತ್ತು ಮಾನ್ಯತೆ” ಕುರಿತ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ನ್ಯಾಕ್ ಮಂಡಳಿ ಸಕಾಲದಲ್ಲಿ ರೂಪಿಸುವ ನಿಯಮಗಳಿಂದ ವಿಶ್ವಾವಿದ್ಯಾಲಯ ಮತ್ತು ಕಾಲೇಜುಗಳ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸದಾ ಚಟುವಟಿಕೆಯಿಂದಿರುತ್ತಾರೆ. ಅದರ ಜೊತೆಗೆ ಸಂಶೋಧನೆ ಮತ್ತು ವಿಶೇಷ ಇತರೆ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಕಲಿಕೆಯಲ್ಲಿ ಆಸಕ್ತಿ ಮತ್ತು ಕ್ರಿಯಾಶೀಲತೆ ಬೆಳೆಯುತ್ತದೆ ಎಂದರು.

ಕೆಬಿಎನ್ ವಿವಿಯ ಉಪ ಕುಲಪತಿಗಳಾದ ಪ್ರೋ ಅಲಿ ರಜಾ ಮೂಸ್ವಿ ಅಧ್ಯಕ್ಷತೆವಹಿಸಿ ಮಾತನಾಡಿ ಕೆಬಿಎನ್ ವಿಶ್ವವಿದ್ಯಾಲಯದ ಸಮಗ್ರ ಶೈಕ್ಷಣಿಕ ಬೆಳವಣಿಗೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.

ಎಲ್ಲಾ ವಿಭಾಗಗಳ ಪ್ರಾಧ್ಯಾಪಕರು ಗುಣಮಟ್ಟದ ಬೋಧನೆ ಮತ್ತು ಸಂಶೋಧನೆಗೆ ಹೆಚ್ಚು ಆದ್ಯತೆ ನೀಡಬೇಕಿದೆ. ನ್ಯಾಕ್ ಮಾನ್ಯತೆ ಶ್ರೇಣಿಯಯಲ್ಲಿ ಉತ್ತಮ ಸ್ಥಾನಗಳಿಸಿ ವಿಶ್ವವಿದ್ಯಾಲಯ ಧನ ಸಹಾಯ ಆಯೋಗದಿಂದ ಅತ್ಯುತ್ತಮ ಯೋಜನೆಗಳನ್ನು ಪಡೆಯುವ ಮೂಲಕ ವೈಯಕ್ತಿಕ ಸಾಧನೆ ಮತ್ತು ಸಂಸ್ಥೆಯ ಪ್ರತಿಷ್ಠೆಯನ್ನು ಉನ್ನತಿ ಸಾಧನೆಗೆ ಆದ್ಯತೆ ನೀಡಿದಂತಾಗುತ್ತದೆ. ಅಲ್ಲದೇ ವಿವಿ ಬಗ್ಗೆ ಕೂಡ ಧನಾತ್ಮಕತೆ ಬೆಳೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಕಲಾ, ಭಾಷಾ, ಮಾನವೀಕತೆ, ಸಮಾಜ ವಿಜ್ಞಾನ ಹಾಗೂ ವಿಜ್ಞಾನ ವಿಭಾಗದ ಡೀನ್ ಡಾ ನಿಶಾತ ಆರೀಫ್ ಹುಸೇನಿ, ವೈದ್ಯಕೀಯ ನಿಕಾಯದ ಡೀನ ಡಾ. ಸಿದ್ದೇಶ್ ಮತ್ತು ಇಂಜಿನಿಯರಿಂಗ್ ನಿಕಾಯದ ಡೀನ ಪ್ರೊ. ಮೊಹಮ್ಮದ್ ಅಜಮ ಹಾಗೂ ಕೆಬಿಎನ್ ವಿವಿಯ ಎಲ್ಲ ನಿಕಾಯದ್ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ಹಫೀಜ್ ಸಮೀರ್ ಹುಸೇನಿ ಪ್ರಾರ್ಥಿಸಿದರು. ಐಕ್ಯೂಎಸಿ ಘಟಕದ ನಿರ್ದೇಶಕ ಡಾ. ಮೊಹಮ್ಮದ ಅಬ್ದುಲ್ ಬಷೀರ್ ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ಕೆಬಿಎನ್ ವಿವಿಯ ಕುಲಸಚಿವೆ ಡಾ. ರುಕ್ಸರ್ ರ್ ಫಾತಿಮಾ ವಂದಿಸಿದರು. ಡಾ. ಇರ್ಫಾನ್ ಅಲಿ ನಿರೂಪಿಸಿದರು.

ಕಾರ್ಯಾಗಾರದ ಮೊದಲನೆಯ ಅವಧಿಯಲ್ಲಿ ಪ್ರೊ.ಎಸ್.ಎ ಅಹ್ಮದ್ “ಆರಂಭಿಕ ಹಂತಗಳು ಮತ್ತು ಮಾರ್ಗಸೂಚಿ ಡೇಟಾವನ್ನು ಸಿದ್ಧಪಡಿಸುವುದು ಮತ್ತು ನಿರ್ವಹಿಸುವುದು” ವಿಷಯದ ಕುರಿತು ಭೋಧನೆ ನೀಡಿದರು.

ಎರಡನೆಯ ಅವಧಿಯಲ್ಲಿ “ನಿಮ್ಮ ಸಂಶೋಧನಾ ಪ್ರೊಫೈಲ್ ಅನ್ನು ನಿರ್ಮಿಸುವುದು ಮತ್ತು ಹೆಚ್ಚಿಸುವುದು” ವಿಷಯದ ಬಗ್ಗೆ ಕರ್ನಾಟಕದ ಕೇಂದ್ರೀಯ ವಿವಿಯ ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರೊ ರೋಮೆಟ್ ಉಪನ್ಯಾಸ ನೀಡಿದರು.

ಪ್ರತಿ ಅವಧಿ ಪ್ರಶ್ನೋತ್ತರ ಅವಧಿಯನ್ನು ಒಳಗೊಂಡಿತ್ತು. ಈ ಕಾರ್ಯಾಗಾರದಲ್ಲಿ ಕಲಾ, ಭಾಷಾ, ಮಾನವೀಕತೆ, ಸಮಾಜ ವಿಜ್ಞಾನ ಹಾಗೂ ವಿಜ್ಞಾನ ವಿಭಾಗದ ಡೀನ್ ಡಾ. ನಿಶಾತ ಆರೀಫ್ ಹುಸೇನಿ, ವೈದ್ಯಕೀಯ ನಿಕಾಯದ ಡೀನ ಡಾ. ಸಿದ್ದೇಶ್ ಮತ್ತು ಇಂಜಿನಿಯರಿಂಗ ನಿಕಾಯದ ಡೀನ ಪ್ರೊ. ಅಜಮ ಮತ್ತಿತರರು ಹಾಜರಿದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

6 mins ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

13 mins ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

2 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

2 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

2 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

3 hours ago