ಕಲಬುರಗಿ: ಖಾಜಾ ಬಂದಾನವಾಜ ವಿವಿ ಭಾರತ ದೇಶಾದ್ಯಂತ ಹೆಸರು ಮಾಡಬೇಕಂದರೆ ಎಲ್ಲ ಉಪನ್ಯಾಸಕರ ಶ್ರಮ ಅಗತ್ಯ. ನಿರಂತರ ಪ್ರಯತ್ನ್ ಹಾಗೂ ಆಸಕ್ತಿಯಿಂದ ಕೆಲಸ ಮಾಡಿದಲ್ಲಿ ಕೆಬಿಎನ್ ವಿವಿಯು ಮುಂಬರುವ ದಿನಗಳಲ್ಲಿ ಅತ್ಯುನ್ನತ ವಿವಿಯ ಪಟ್ಟಿಯಲ್ಲಿ ಸೇರಬಹುದು ಎಂದು ಕೆಬಿಎನ್ ವಿಶ್ವವಿದ್ಯಾಲಯದ ಸಮ ಕುಲಪತಿ ಸಯ್ಯದ ಮುಹಮ್ಮದ್ ಅಲಿ ಅಲ್ ಹುಸೇನಿ ಹೇಳಿದರು.
ಕರ್ಯಾಗಾರದ್ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿ, ಇಂದಿನ ಕಾರ್ಯಾಗಾರದಲ್ಲಿ ಕಲಿತ ವಿಷಯಗಳನ್ನು ಪರಿಗಣಿಸಿ, ವಿವಿಯ ಉಪ ಕುಲಪತಿಯವರ ಮಾರ್ಗದರ್ಶನದಲ್ಲಿ ಇನ್ನೂ ಹೆಚ್ಚು ಸಂಶೋಧನೆಗಳನ್ನು ಕೈಗೊಂಡು ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ವಿವಿಯ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬರ ಪಾತ್ರವೂ ಮುಖ್ಯ. ನಾವೆಲ್ಲ ಒಟ್ಟಾಗಿ ಶ್ರಮಿಸೋಣ ಎಂದರು.
ವಿವಿಯ ಉಪ ಕುಲಪತಿ ಪ್ರೋ ಅಲಿ ರಜಾ ಮೂಸ್ವಿ ಕಾರ್ಯಾಗಾರ ಕುರಿತು ಮಾತನಾಡಿದರು.
ಡಾ ನಮ್ರತಾ ರಾವುತ, ಡಾ ಮೈನುದ್ದಿನ್ ಹಾಗೂ ರಮೇಶ್ ಕಾರ್ಯಾಗಾರ ಕುರಿತು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು. ಡಾ. ಬಷೀರ್ ವಂದಿಸಿದರು.ಡಾ ಇರ್ಫಾನ್ ಅಲಿ ನಿರೂಪಿಸಿದರು.
ಈ ಕಾರ್ಯಾಗಾರದಲ್ಲಿ ಕಲಾ, ಭಾಷಾ, ಮಾನವೀಕತೆ, ಸಮಾಜ ವಿಜ್ಞಾನ ಹಾಗೂ ವಿಜ್ಞಾನ ವಿಭಾಗದ ಡೀನ್ ಡಾ. ನಿಶಾತ ಆರೀಫ್ ಹುಸೇನಿ, ವೈದ್ಯಕೀಯ ನಿಕಾಯದ ಡೀನ ಡಾ. ಸಿದ್ದೇಶ್ ಮತ್ತು ಇಂಜಿನಿಯರಿಂಗ ನಿಕಾಯದ ಡೀನ ಪ್ರೊ. ಅಜಮ ಹಾಗೂ ಎಲ್ಲ ನಿಕಾಯದ್ ಪ್ರಧ್ಯಪಕರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…