ಬಿಸಿ ಬಿಸಿ ಸುದ್ದಿ

ಹುಟ್ಟು ಹಬ್ಬದ ನೆಪದಲ್ಲಿ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ನೀಡುವ ಕಾರ್ಯ ಶ್ಲಾಘನೀಯ

ಶಹಾಬಾದ: ಹುಟ್ಟು ಹಬ್ಬದ ನೆಪದಲ್ಲಿ ಕೇಕನ್ನು ಕತ್ತರಿಸುವ ಬದಲು ಬಿಸಿಲು ನಾಡಿನ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುವುದರ ಮೂಲಕ ಅವರನ್ನು ಪ್ರೋತ್ಸಾಹಿಸುವ ನಿಂಗಪ್ಪ ಹುಳಗೋಳಕರ್ ಮಾಡುತ್ತಿರುವುದು ಕಾರ್ಯ ಶ್ಲಾಘನೀಯವಾದುದು ಎಂದು ರಾವೂರ ಗ್ರಾಮದ ಸಿದ್ಧಲಿಂಗೇಶ್ವರ ಸಂಸ್ಥಾನ ಮಠದ ಸಿದ್ಧಲಿಂಗ ಮಹಾಸ್ವಾಮಿಗಳು ಹೇಳಿದರು.

ಅವರು ಬುಧÀವಾರ ನಗರದ ಜಗದಂಬಾ ಮಂದಿರದಲ್ಲಿ ನಗರದ ಮತ್ತಿಮಡು ಅಭಿಮಾನಿಗಳ ಬಳಗ ಹಾಗೂ ಸ್ನೇಹಿತರ ಬಳಗದ ವತಿಯಿಂದ ಬಿಜೆಪಿ ಮುಖಂಡ ನಿಂಗಪ್ಪ.ಎಸ್.ಹುಳಗೋಳಕರ್ ಅವರ 55ನೇ ಹುಟ್ಟು ಹಬ್ಬದ ಅಂಗವಾಗಿ ತಾಲೂಕಿನಲ್ಲಿ ಹಾಗೂ ಎಸ್.ಎಸ್.ಎಲ್.ಸಿಯಲ್ಲಿ ಶಾಲಾವಾರು ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದರು.

ಕೇಕ್ ಕತ್ತರಿಸಿ ದೀಪ ಆರಿಸುವ ಸಂಸ್ಕøತಿ ನಮ್ಮದಲ್ಲಿ. ದೀಪ ಬೆಳಗಿಸುವ ಸಂಸ್ಕøತಿ ನಮ್ಮದು. ನಮ್ಮ ದೇಶದಲ್ಲಿ ಪ್ರತಿಭಾವಂತರಿಗೇನೋ ಕೊರತೆಯಿಲ್ಲ.ಆದರೆ ಅವರನ್ನು ಪ್ರೋತ್ಸಾಹಿಸುವವರ, ಬಳಸಿಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆಯಿದೆ. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಈ ರೀತಿಯಾಗಿ ಗುರುತಿಸಿ ಗೌರವಿಸುದರಿಂದ ಮತ್ತಷ್ಟು ವಿದ್ಯಾಭ್ಯಾಸ ಮಾಡಲು ಪೆÇ್ರೀತ್ಸಾಹ ನೀಡಿದಂತಾಗುತ್ತದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಬಸವರಾಜ ಮತ್ತಿಮಡು, ಹತ್ತನೇ ತರಗತಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ ಪುರಸ್ಕಾರ ನೀಡಿ ಗೌರವಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಇದರಿಂದ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡಿದಂತಾಗುವುದು ಎಂದರು. ವಿದ್ಯಾರ್ಥಿಗಳಾದವರು ತಮ್ಮ ಶಿಕ್ಷಣ ಬದುಕಿನಲ್ಲಿ ವಿದ್ಯಾಭ್ಯಾಸ ಮಾಡುವ ವೇಳೆಯಲ್ಲಿ ಸರಿಯಾಗಿ ವಿದ್ಯಾಭ್ಯಾಸ ಮಾಡಬೇಕು ಅದೇ ರೀತಿ ಆಟ ಆಡುವ ಸಮಯದಲ್ಲಿ ಆಟವಾಡಬೇಕು ಮತ್ತು ಎಂಜಾಯ್ ಮಾಡುವ ವೇಳೆ ಎಂಜಾಯ್ ಮಾಡಬೇಕು. ಈ ಮೂರನ್ನು ಬ್ಯಾಲೆನ್ಸ್ ಮಾಡಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ತೊನಸನಹಳ್ಳಿ(ಎಸ್) ಗ್ರಾಮದ ಮಲ್ಲಣಪ್ಪ ಸ್ವಾಮಿಗಳು ಮಾತನಾಡಿದರು. ನಗರ ಸಭೆ ಪೌರಾಯುಕ್ತ ಬಸವರಾಜ ಹೆಬ್ಬಾಳ್,ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಬಿರಾದಾರ, ವೀರಣ್ಣ ಕಲ್ಲೂರ್,ಶಹಾಬಾದ ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಉದ್ಯಮೆದಾರ ನರೇಂದ್ರ ವರ್ಮಾ, ವಿಹಿಂಪ ಮಾಜಿ ಅಧ್ಯಕ್ಷ ನಾಗರಾಜ ಮೇಲಗಿರಿ, ರಾಜು ಚವ್ಹಾಣ ಆರ್.ಎಮ್.ಸಿ ವೇದಿಕೆಯ ಮೇಲಿದ್ದರು. ಸಭೆಯ ಅಧ್ಯಕ್ಷತೆಯನ್ನು ಮತ್ತಿಮಡು ಅಭಿಮಾನಿ ಬಳಗದ ಅಧ್ಯಕ್ಷ ನಿಂಗಪ್ಪ ಹುಳಗೋಳಕರ ವಹಿಸಿದ್ದರು.

ಈ ಸಂದರ್ಭದಲ್ಲಿ ಸದಾನಂದ ಕುಂಬಾರ, ಪರಮಾನಂದ ಯಲಗೋಡಕರ್, ದೇವೆಂದ್ರಪ್ಪ ಯಲಗೋಡಕರ್, ಭೀಮಯ್ಯ ಗುತ್ತೆದಾರ, ಕಾಶಣ್ಣ ಚನ್ನೂರ್, ಪ್ರಭು ಸೀಬಾ, ವಿಜಯಕುಮಾರ ಮುತ್ತಗಿ, ಮಹಾದೇವ ಬಂದಳ್ಳಿ ಇತರರು ಇದ್ದರು. ಇದೇ ಸಂದರ್ಭದಲ್ಲಿ ಎಂ.ಬಿ.ಬಿ.ಎಸ್ ಹಾಗೂ ಎಸ್.ಎಸ್.ಎಲ್.ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಮರಲಿಂಗ ಯಾದಗಿರಿ ನಿರೂಪಿಸಿದರು, ಲೋಹಿತ್ ಕಟ್ಟಿ ಪ್ರಾಸ್ತಾವಿಕ ನುಡಿದರು,ಬಸವರಾಜ ಮದ್ರಿಕಿ, ಶರಣು ತುಂಗಳ ವಂದಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

18 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago