ಕಲಬುರಗಿ: ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿಯು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸಂಸ್ಥಾಪನ ದಿನಾಚರಣೆ ನಿಮಿತ್ತ ಕೊಡಲ್ಪಡುವ ರಾಜ್ಯ ಮಟ್ಟದ ಸ್ನೇಹ ಶ್ರೀ ಪ್ರಶಸ್ತಿಗೆ ಡಾ.ವಾಯ್ ಎಚ್ ನಾಯಕವಾಡಿ ಪ್ರಾಧ್ಯಾಪಕಪಕರು ಇತಿಹಾಸ ಅಧ್ಯಯನ ವಿಭಾಗ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಮೈಸೂರು ಇವರಿಗೆ ನೀಡಿ ಗೌರವಿಸಲಾಗುವುದು.
ಕಾರ್ಯಕ್ರಮದ ಉದ್ಘಾಟನೆಯನ್ನು ಪೆÇ್ರ:ಬಿ.ಜಿ.ನಾಟಿಕಾರ ಮಾಜಿ ಗೌರವಾಧ್ಯಕ್ಷರು ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿ ಅವರು ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ಡಾ.ನಾಗಾಬಾಯಿ ಬಿ ಬುಳ್ಳಾ ಮಾಜಿ ಸದಸ್ಯರು ಕರ್ನಾಟಕ ಲೋಕಸೇವಾ ಆಯೋಗ ಬೆಂಗಳೂರು ಶ್ರೀ ಕಾಶಿನಾಥ ಎಸ್ ಪಲ್ಲೇರಿ ಸಹಾಯಕ ಆಯುಕ್ತರು ವಾಣಿಜ್ಯ ತೆರಿಗೆ ಇಲಾಖೆ ಕಲಬುರಗಿ ಅಂಬರೀಷ್ ಎಂ ಪಾಟೀಲ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯತ್ ಕಮಲಾಪುರ, ಮಾಣಿಕ ಎಸ್. ಕನಕಟ್ಟಿ ಕಾರ್ಯಪಾಲಕ ಅಭಿಯಂತರರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ ವಿಭಾಗ ಉಪಸ್ಥಿತಿ, ಸೈಬಣ್ಣಾ ಕೆ ವಡಗೇರಿ ಕಾರ್ಯಾಧ್ಯಕ್ಷರು ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿ ಕಲಬುರಗಿ, ರಾಮಲಿಂಗ ಎಸ್ ನಾಟಿಕಾರ ಉಪಾಧ್ಯಕ್ಷರು ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿ ಕಲಬುರಗಿ, ಅಧ್ಯಕ್ಷತೆ ಡಾ.ಬಿ.ಪಿ.ಬುಳ್ಳಾ ಗೌರವಾಧ್ಯಕ್ಷರು ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿ ಕಲಬುರಗಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸ್ಥಾಪನಾ ದಿನಾಚರಣೆ ನಿಮಿತ್ತ ಸ್ನೇಹ ಶ್ರೀ ಪ್ರಶಸ್ತಿ, ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ದ್ವಿತೀಯ ವರ್ಷದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಮತ್ತು ಸಾಮಾನ್ಯ ಸಭೆಯನ್ನು ಕರೆಯಲಾಗಿದೆ. ಅಖಿಲ ಕರ್ನಾಟಕ ಸ್ನೇಹ ಗಂಗಾ ವಾಹಿನಿ ಸದಸ್ಯರು ಹಾಗೂ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಸಶ್ವಿಗೊಳಿಸಬೇಕೇಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.