ಕಲಬುರಗಿ: ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಪ್ರಭಾರಿ ಅಧ್ಯಕ್ಷರಾಗಿ ಹಿರಿಯ ಸಹಕಾರಿ ಧುರೀಣ ಸುರೇಶ ಸಜ್ಜನ ಸುರಪುರ ಅವರು ಶುಕ್ರವಾರ ಜರುಗಿದ ಬ್ಯಾಂಕಿನ ಆಡಳಿತ ಮಂಡಳಿ ಸಭೆಯಲ್ಲಿ ಆಯ್ಕೆಗೊಂಡರು.
ಈ ಹಿಂದೆ ಅಧ್ಯಕ್ಷರಾಗಿದ್ದ ರಾಜಕುಮಾರ ಪಾಟೀಲ್ ತೆಲ್ಕೂರ ಅವರು ರಾಜೀನಾಮೆ ನೀಡಿದ ಪ್ರಯುಕ್ತ ತೆರವಾದ ಸ್ಥಾನಕ್ಕೆ ಹಂಗಾಮಿ ಅಧ್ಯಕ್ಷರನ್ನು ಆಯ್ಕೆ ಮಾಡಲು ನಗರದ ಗಾಜಿಪುರದಲ್ಲಿರುವ ಬ್ಯಾಂಕಿನ ಸಭಾಂಗಣದಲ್ಲಿ ಜರುಗಿದ ಎಲ್ಲ ನಿರ್ದೇಶಕರ ಸಭೆಯಲ್ಲಿ ಚರ್ಚೆ ನಡೆಸಿ ನಿಯಮದಂತೆ ಹಾಲಿ ಉಪಾಧ್ಯಕ್ಷರಾಗಿರುವ ಸುರೇಶ ಸಜ್ಜನ ಅವರನ್ನು ಸರ್ವಾನುಮತದಿಂದ ಹಂಗಾಮಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಮುಂಗಾರು ಹಂಗಾಮು ಆರಂಭÀಗೊಳ್ಳುತ್ತಿರುವುದರಿAದ ರೈತರಿಗೆ ಸಾಲ ವಿತರಣೆ ಮಾಡುವ ಕುರಿತು ಶೀಘ್ರವೇ ಜಿಲ್ಲೆ ಸಚಿವರನ್ನು ಭೇಟಿ ಮಾಡಿ ಚರ್ಚಿಸುವೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು, ನಬಾರ್ಡ್ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ರೈತರಿಗೆ ಅನುವು ಮಾಡಿಕೊಡಲು ಪ್ರಯತ್ನಿಸುವೆ. ಡಿಸಿಸಿ ಬ್ಯಾಂಕ್‌ನನ್ನು ಇನ್ನಷ್ಟು ಬಲಗೊಳಿಸಿ ಕೃಷಿಕರಿಗಾಗಿ ಕೆಲವೊಂದು ಹೊಸ ಯೋಜನೆಗಳನ್ನು ರೂಪಿಸಲು ಬ್ಯಾಂಕ್ ಅಧಿಕಾರಿಗಳ ಹಾಗೂ ನಿರ್ದೇಶಕ ಸಭೆ ನಡೆಸಲಾಗುವುದು. – ಸುರೇಶ ಸಜ್ಜನ ಕೆವೈಡಿಸಿಸಿ ಬ್ಯಾಂಕ್ ಅಧ್ಯಕ್ಷ.
ಆಯ್ಕೆಯಾಗುತ್ತಲೇ ಎಲ್ಲ ನಿರ್ದೇಶಕರು ಹಾಗೂ ಅಧಿಕಾರಿಗಳು ಸಜ್ಜನ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಬ್ಯಾಂಕಿನ ಮುಂಭಾಗದಲ್ಲಿ ಜಮಾಗೊಂಡಿದ್ದ ಅವರ ಬೆಂಬಲಿಗರು ಸುರೇಶ ಸಜ್ಜನ ಆಯ್ಕೆ ಘೋಷಣೆ ಮಾಡುತ್ತಲೇ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಶಿವಾನಂದ ಮಾನಕರ್, ಕೆವೈಡಿಸಿಸಿ ನಿರ್ದೇಶಕರಾದ ಸೋಮಶೇಖರ ಗೋನಾಯಕ, ಶರಣಬಸಪ್ಪ ಪಾಟೀಲ್ ಅಷ್ಟಗಿ, ಬಾಪುಗೌಡ ಪಾಟೀಲ್ ಹುಣಸಗಿ, ಸಿದ್ರಾಮರಡ್ಡಿ ಕೌಳೂರ ಯಾದಗಿರಿ, ಗೌತಮ ಪಾಟೀಲ್ ಚಿಂಚೋಳಿ, ಬಸವರಾಜ ಪಾಟೀಲ್ ಹೇರೂರ, ಅಶೋಕ ಸಾವಳೇಶ್ವರ ಆಳಂದ, ಚಂದ್ರಶೇಖರ ತಳ್ಳಳ್ಳಿ, ನಿಂಗಣ್ಣ ದೊಡ್ಡಮನಿ, ಉತ್ತಮ ಬಜಾಜ ಮೊದಲಾದವರಿದ್ದರು. ಸಿಇಒ ಮತ್ತು ಎಂಡಿ ವಿಶ್ವನಾಥ ಮಲಕೂಡ ಅವರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.
ಕಿಶೋರ ಸೇಠ ಸುರಪುರ, ಪ್ರಕಾಶ ಸಜ್ಜನ, ರಾಜಾ ಮುಕುಂದ ನಾಯಕ, ಮಂಜುನಾಥ ಗುಳಗಿ, ಮಲ್ಲಿಕಾರ್ಜುನ ರಡ್ಡಿ ಹತ್ತಿಕುಣಿ, ಶಾಂತರಡ್ಡಿ ಚೌಧರಿ ಮುದನೂರ, ವಿಶ್ವರಾಧ್ಯ ಸತ್ಯಂಪೇಟೆ, ರೇವಣಸಿದ್ದಪ್ಪ ಸಂಕಾಲಿ, ಶರಣು ಬಿಲ್ಲಾಡ, ಚಂದ್ರಕಾAತ ಗೌಡರ, ಸೇರಿದಂತೆ ಅನೇಕರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…