ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಎಲ್ಲ ರೀತಿಯ ನೆರವು ನೀಡುವೆವು

0
24

ಸುರಪುರ: ಬಾಲ ಭವನ ಸೊಸೈಟಿ ಬೆಂಗಳೂರು,ಜಿಲ್ಲಾ ಆಡಳಿತ,ತಾಲೂಕು ಪಂಚಾಯತಿ,ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಸೊಸೈಟಿ ಯಾದಗಿರಿ ಮತ್ತು ಶ್ರೀ ಖಾಸ್ಗತೇಶ್ವರ ನೃತ್ಯ ಕಲಾ ಸಂಸ್ಥೆ ಸಹಭಾಗಿತ್ವದಲ್ಲಿ ನಗರದ ರಂಗಂಪೇಟೆಯ ನಗರೇಶ್ವರ ದೇವಸ್ಥಾನದ ಆವರಣದಲ್ಲಿ ಕಳೆದ ಹತ್ತು ದಿನಗಳಿಂದ ನಡೆದ ಬೇಸಿಗೆ ತರಬೇತಿಯ ವಾರಾಂತ್ಯ ಶಿಬಿರದ ಸಮಾರೋಪ ಸಮಾರಂಭ ನಡೆಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ ನಾಯಕ ಮಾತನಾಡಿ,ಬೇಸಿಗೆ ಸಂದರ್ಭದಲ್ಲಿ ಶಾಲಾ ತರಗತಿಗಳು ಇಲ್ಲದಾಗ ಮಕ್ಕಳ ಓದು ಹಾಳಾಗದ ನಿಟ್ಟಿನಲ್ಲಿ ಇಂತಹ ಶಿಬಿರಗಳು ಸಹಕಾರಿಯಾಗಲಿವೆ,ಇಲ್ಲಿಯ ಮಕ್ಕಳಿಗೆ ನೃತ್ಯ,ಯೋಗ ಮತ್ತು ಕರಾಟೆ ತರಬೇತಿ ನೀಡುವ ಮೂಲಕ ಮಕ್ಕಳ ದೈಹಿಕ,ಬೌಧ್ಧಿಕ,ಮಾನಸಿಕ ಮತ್ತು ಶಾರೀರಿಕ ಬೆಳವಣಿಗೆಗೆ ಸಹಕಾರಿಯಾಗಿರುವುದು ಸಂತೋಷದ ಸಂಗತಿಯಾಗಿದೆ.ಮುಂದೆಯೂ ಇಂತಹ ಯಾವುದೇ ಕಾರ್ಯಕ್ರಮವನ್ನು ನಡೆಸಲು ಬೇಕಾದ ನೆರವನ್ನು ನೀಡುವುದಾಗಿ ಭರವಸೆ ನೀಡಿದರು.

Contact Your\'s Advertisement; 9902492681

ಇದೇ ಸಂದರ್ಭದಲ್ಲಿ ಸಂಸ್ಥೆಯ ಬೆಳವಣಿಗೆ ಹಾಗೂ ಮಕ್ಕಳಿಗೆ ನೀಡುವ ತರಬೇತಿಗಳ ಕುರಿತು ಸಂಸ್ಥೆಯ ಅಧ್ಯಕ್ಷ ಅನಿಲ ಕಟ್ಟಿಮನಿ ಹಾಗೂ ಕರಾಟೆ ತರಬೇತುದಾರ ಬಾಗೇಶ್ ಕುಂಬಾರ ಮಾಹಿತಿ ನೀಡಿದರು.ಇದೇ ಸಂದರ್ಭದಲ್ಲಿ ವಿವಿಧ ಮಕ್ಕಳು ನೃತ್ಯ ಹಾಗೂ ಕರಾಟೆ ಪ್ರದರ್ಶನ ಮಾಡುವ ಮೂಲಕ ಎಲ್ಲರ ಮೆಚ್ಚುಗೆ ಪಡೆದರು.ತರಬೇತಿಯಲ್ಲಿ ಭಾಗವಹಿಸಿದ್ದ ಎಲ್ಲ ಮಕ್ಕಳಿಗೆ ಅಭಿನಂದನಾ ಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ವೇದಿಕೆ ಮೇಲೆ ವಕೀಲ ವೆಂಕಟೇಶ ಪೋಲ್ಕರ್,ಹಣಮಂತ ಬಿಲ್ಲವ್,ಗಂಗಾಧರ ಉಪಸ್ಥಿತರಿದ್ದರು.ನೃತ್ಯ ತರಬೇತುದಾರರಾದ ಲಕ್ಷ್ಮೀ ಎಸ್.ಕುಂಬಾರ ಕಾರ್ಯಕ್ರಮಕ್ಕೆ ಎಲ್ಲರ ಸ್ವಾಗತಿಸಿ,ನಿರೂಪಿಸಿ ವಂದಿಸಿದರು.ಕಾರ್ಯಕ್ರಮದಲ್ಲಿ ಅನೇಕ ಜನ ಪೋಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here