ಬಿಸಿ ಬಿಸಿ ಸುದ್ದಿ

ಕಲಬುರಗಿಯಲ್ಲಿ ಮೊಟ್ಟ ಮೊದಲ ಬಾರಿಗೆ ಇಶಾ ಫೌಂಡೇಶನ್ ವತಿಯಿಂದ 7 ದಿನಗಳ ಶಿಬಿರ

ಕಲಬುರಗಿ: ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದ ಕೊಯಂಬತ್ತೂರಿನ ಇಶಾ ಫೌಂಡೇಶನ್ ವತಿಯಿಂದ ಕಲಬುರಗಿಯಲ್ಲಿ ಜೂನ್ 14 ರಿಂದ 20 ರವರೆಗೆ 7 ದಿನಗಳ ಇನ್ನರ್ ಇಂಜಿನಿಯರಿಂಗ್ ಯೋಗ ಮತ್ತು ಧ್ಯಾನ ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಶನ್‍ನ ಸ್ವಯಂ ಸೇವಕ ಮನು ಚಂದ್ರಹಾಸ ತಿಳಿಸಿದರು.

ಜಗತ್ತಿನಾದ್ಯಂತ ಇನ್ನರ್ ಇಂಜಿನಿಯರಿಂಗ್ ಪ್ರಚಲಿತದಲ್ಲಿದ್ದು, ಇದೇ ಮೊದಲ ಬಾರಿಗೆ ಕಲಬುರಗಿ ನಗರದ ಗೋದುತಾಯಿ ನಗರದಲ್ಲಿರುವ ಮದರ್ ತೆರೆಸಾ ಬಿ.ಇಡಿ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ವೇಳೆ ಪುರಾತನ ಶಂಭಾವಿ ಮಹಾಮುದ್ರಾ ಕ್ರಿಯೆಯನ್ನು ಸಹ ನಡೆಸಲಾಗುತ್ತಿದ್ದು, ಒತ್ತಡದ ಜೀವನ, ವಿಶ್ರಾಂತ ರಹಿತ ಜೀವನ ನಡೆಸುವ ವ್ಯಕ್ತಿಗಳು ಮಾನಸಿಕ ಸಂತುಲನೆ ಮತ್ತು ಆರೋಗ್ಯ ಸುಧಾರಣೆಗಾಗಿ ಯೋಗ ಮತ್ತು ಧ್ಯಾನದಲ್ಲಿ ಭಾಗವಹಿಸಬಹುದಾಗಿದೆ ಎಂದು ಅವರು ಹೇಳಿದರು.

ಇಶಾ ಫೌಂಡೇಶನ್ ಸ್ಥಾಪಕರಾದ ಸದ್ಗುರುಗಳು ಇನ್ನರ್ ಇಂಜಿನಿಯರಿಂಗ್ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಿದ್ದಾರೆ. ಏಳು ದಿನದ ಕಾರ್ಯಕ್ರಮ ಎರಡು ಬ್ಯಾಚ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದು, ಬುಧವಾರ ಮತ್ತು ಶನಿವಾರ ಬೆಳಗ್ಗೆ 6 ರಿಂದ 9 ಗಂಟೆ ಅಥವಾ ಸಂಜೆ 6 ರಿಂದ 9, ಭಾನುವಾರ ದಿನವಿಡೀ ಬೆಳಗ್ಗೆ 7 ರಿಂದ ಸಂಜೆ 5 ಗಂಟೆ ವರೆಗೆ ಹಾಗೂ ಸೋಮವಾರ ಮತ್ತು ಮಂಗಳವಾರ ಬೆಳಗ್ಗೆ 6 ರಿಂದ 9, ಸಂಜೆ 6 ರಿಂದ 9 ಗಂಟೆ ವರೆಗೆ ನಡೆಯಲಿದೆ. ಹೀಗಾಗಿ 15 ವರ್ಷ ಮೇಲ್ಪಟ್ಟ ಎಲ್ಲರೂ ಈ ಶಿಬಿರರದಲ್ಲಿ ಭಾಗವಹಿಸಬಹುದಾಗಿದೆ. ಯೋಗ ಹಾಗೂ ಧ್ಯಾನದಲ್ಲಿ ಪಾಲ್ಗೊಳ್ಳುವವರು ರು.2000 ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ ಎಂದು ವಿವರಿಸಿದರು.

ಇಶಾ ಫೌಂಡೇಶನ್ ನ ಸ್ವಯಂ ಸೇವಕರಾದ ಗಣೇಶ್, ಅಪರ್ಣ ಹಾಗೂ ಜ್ಯೋತಿ ತೇಗನೂರು, ಕನ್ನೇಶ ಇದ್ದರು.

ನಮ್ಮ ವ್ಯವಸ್ಥೆಯ ಮೇಲೆ ನಮ್ಮ ನಿಯಂತ್ರಣ ತಪ್ಪಿ ಹೋಗಿದ್ದು, ನಮ್ಮೊಳಗಿನ ವಾತಾವರಣವನ್ನು ನಿರ್ವಹಣೆ ಮಾಡುವುದು ಹೇಗೆ? ಮತ್ತು ಆಂತರಿಕ ಸನ್ನಿವೇಶ ಸೃಷ್ಠಿಸಿಕೊಂಡು ನಮ್ಮಷ್ಟಕ್ಕೆ ನಾವೇ ಸಾಂತ್ವನಗೊಳಿಸಿಕೊಳ್ಳುವ ಪ್ರಕ್ರಿಯೆಯೇ ಇನ್ನರ್ ಇಂಜಿನಿಯರಿಂಗ್ ಮುಖ್ಯ ಉದ್ದೇಶವಾಗಿದೆ. -ಮನು ಚಂದ್ರಹಾಸ, ಸ್ವಯಂ ಸೇವಕ, ಇಶಾ ಫೌಂಡೇಶನ್

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

7 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

17 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago