ಕಲಬುರಗಿ: ಅಫಜಲಪೂರ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2023-24ನೇ ಶೈಕ್ಷಣಿಕ ವರ್ಷಕ್ಕೆ ಖಾಲಿಯಿರುವ ಗಣಿತ ಅತಿಥಿ ಶಿಕ್ಷಕ ಹುದ್ದೆಗೆ ಹಾಗೂ ಸ್ಟಾಫ್ ನರ್ಸ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ವಸತಿ ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಿ ಆಂಡ್ ಆರ್ ನಿಯಮಾನುಸಾರ ಅಭ್ಯರ್ಥಿಗಳು ಬಿ.ಎಸ್ಸಿ. ಬಿ.ಎಡ್. ಗಣಿತ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಸ್ಟಾಫ್ ನರ್ಸ್ ಹುದ್ದೆಗೆ ಬಿ.ಎಸ್ಸಿ. ನಸಿರ್ಂಗ್ ಅಥವಾ 3 ವರ್ಷದ ಡಿಪೆÇ್ಲೀಮಾ ಪದವಿ ಪಡೆದಿರಬೇಕು.
ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ಅಗತ್ಯ ಶೈಕ್ಷಣಿಕ ದಾಖಲೆ ಹಾಗೂ ಸ್ವವಿವರದ ಅರ್ಜಿಯೊಂದಿಗೆ (ಬಯೋಡಾಟ) ಖುದ್ದಾಗಿ ಅಫಜಲಪೂರ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಚೇರಿಗೆ ಬಂದು 2023ರ ಜೂನ್ 7ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಅಫಜಲಪೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ಮೊಬೈಲ್ ಸÀಂಖ್ಯೆ 9880204478ಗೆ ಸಂಪರ್ಕಿಸಲು ಕೋರಲಾಗಿದೆ.
ಅವರಾದ (ಬಿ): ಇಂಗ್ಲೀಷ ಭಾಷಾ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
ಕಲಬುರಗಿ: ಕಲಬುರಗಿ ನಗರದ ಹುಮನಾಬಾದ ರಸ್ತೆಯಲ್ಲಿರುವ ಶ್ರೀ ಸ್ವಾಮಿ ಸಮರ್ಥ ಗುಡ್ಡದ ಪಕ್ಕದಲ್ಲಿರುವ ಅವರಾದ (ಬಿ) ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 2023-24ನೇ ಶೈಕ್ಷಣಿಕ ವರ್ಷಕ್ಕೆ ಖಾಲಿಯಿರುವ ಇಂಗ್ಲೀಷ ಭಾಷಾ ಶಿಕ್ಷಕ ಹುದ್ದೆಗೆ ಅರ್ಹ ಅಭ್ಯಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅವರಾದ (ಬಿ) ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಇಂಗ್ಲೀಷ ಭಾಷಾ ಶಿಕ್ಷಕ ಹುದ್ದೆಗೆ ಬಿ.ಎ., ಬಿ.ಎಡ್. ಇಂಗ್ಲೀಷ ಭಾಷಾ ಪದವಿ ಜೊತೆಗೆ ಟಿ.ಇ.ಟಿ. ಪಾಸಾಗಿರುವ ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೆಟಾ ಮತ್ತು ಸಂಬಂಧಿಸಿದ ಪ್ರಮಾಣಪತ್ರಗಳ ಝೆರಾಕ್ಸ್ ಪ್ರತಿಯೊಂದಿಗೆ ಖುದ್ದಾಗಿ ಅವರಾದ (ಬಿ) ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಬಂದು 2023ರ ಜೂನ್ 8 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಸೇವಾ ಅನುಭವ ಇರುವವರಿಗೆ ಆದ್ಯತೆ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅವರಾದ (ಬಿ) ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರ ಮೊಬೈಲ್ ಸಂಖ್ಯೆ 9743458245ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…